11:31 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಛತ್ತೀಸ್‌ಗಢದಲ್ಲಿ ಭೀಕರ ವಿಮಾನ ಅಪಘಾತ: ಬೆಟ್ಟಕ್ಕೆ ಡಿಕ್ಕಿ ಹೊಡೆದ ಖಾಸಗಿ ಜೆಟ್, ಇಬ್ಬರು ಪೈಲೆಟ್‌ ಸಾವು

20/04/2026, 21:39

ಜಶ್‌ಪುರ(reporterkarnataka.com): ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಹಾರಾಟ ನಡೆಸುತ್ತಿದ್ದ ಖಾಸಗಿ ವಿಮಾನವೊಂದು ನಿಯಂತ್ರಣ ತಪ್ಪಿ ಬೆಟ್ಟದ ಪ್ರದೇಶಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.
ಜಶ್‌ಪುರ-ನಾರಾಯಣಪುರ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ನೀಡಿರುವ ಮಾಹಿತಿಯ ಪ್ರಕಾರ, ವಿಮಾನವು ಹಾರಾಟ ನಡೆಸುತ್ತಿದ್ದಾಗ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಕೂಡಲೇ ನಿಯಂತ್ರಣ ಕಳೆದುಕೊಂಡ ವಿಮಾನವು ಸಮೀಪದ ಬೆಟ್ಟಕ್ಕೆ ಅಪ್ಪಳಿಸಿ ಪತನಗೊಂಡಿದೆ. ಅಪಘಾತದ ರಭಸಕ್ಕೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಿಂದ ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಆಕಾಶಕ್ಕೆ ಚಿಮ್ಮುತ್ತಿರುವ ದೃಶ್ಯಗಳು ಕಂಡುಬಂದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು