8:09 AM Saturday10 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಪ್ರವಾಸೋದ್ಯಮ | ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ – ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಭೇಟಿ

21/04/2026, 14:17

ಮಂಗಳೂರು (reporterkarnataka.com): ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸೋಮವಾರದಂದು ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್‌ ಸ್ಪೋರ್ಟ್ಸ್‌ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಸಮಾಲೋಚಿಸಲಾಯಿತು. ಪ್ರಮುಖವಾಗಿ, ಆಸ್ಟ್ರೇಲಿಯಾದ ತಾಂತ್ರಿಕ ನೈಪುಣ್ಯತೆ ಮತ್ತು ಈ ಕ್ಷೇತ್ರದಲ್ಲಿ ಅವರಿಗಿರುವ ದಶಕಗಳ ಅನುಭವವನ್ನು ನಮ್ಮ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಹೇಗೆ ಬಳಸಿಕೊಳ್ಳಬಹುದು ಎಂಬ ಬಗ್ಗೆ ಪರಸ್ಪರ ಚರ್ಚಿಸಲಾಯಿತು.ಕ್ರೀಡಾ ಕ್ಷೇತ್ರದಲ್ಲಿ ಯುವಜನತೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳೊಂದಿಗೆ ಕ್ರೀಡಾ ಪಠ್ಯಕ್ರಮ ಅಭಿವೃದ್ಧಿಗಾಗಿ ಸಹಭಾಗಿತ್ವ ಹೊಂದುವ ಕುರಿತು ಕೂಡ ಇದೇವೇಳೆ ಚರ್ಚಿಸಲಾಯಿತು. ಈ ಸೌಹಾರ್ದಯುತ ಭೇಟಿಯ ಸಂದರ್ಭದಲ್ಲಿ ಕಾನ್ಸಲ್ ಜನರಲ್ ಅವರು ಸಂಸದ ಕ್ಯಾ. ಚೌಟ ಅವರಿಗೆ ಸ್ಮರಣಿಕೆಯಾಗಿ ಲೆದರ್ ಬಾಲ್ ಅನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷವಾಗಿತ್ತು.ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು ಇಂತಹ ಉಪಕ್ರಮಗಳು ಎರಡು ದೇಶಗಳ ನಡುವಿನ ಸಂಬಂಧ ಗಟ್ಟಿಗೊಳಿಸುವುದಲ್ಲದೆ ನಮ್ಮ ಯುವಜನತೆಗೆ ಜಾಗತಿಕ ಮಟ್ಟದ ಕೌಶಲ್ಯ ಮತ್ತು ಮಾನ್ಯತೆಯನ್ನು ಒದಗಿಸುವ ಮೂಲಕ ಹೊಸ ಹಾದಿ ತೆರೆಯಲಿವೆ. ಅಲ್ಲದೆ ಇದು ಆರ್ಥಿಕ ಪ್ರಗತಿಯ ಜೊತೆಗೆ ‘ವಿಕಸಿತ ಭಾರತ’ದ ದೃಷ್ಟಿಕೋನಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು