6:28 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು ಸಾಧ್ಯವಾಗಲೇ ಇಲ್ಲ: ನಲಪಾಡ್ ಅಳಲು

21/04/2026, 21:03

ಬೆಂಗಳೂರು(reporterkarnataka.com): ಇಡಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಮಾತನಾಡಿರುವ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್, ಇಡಿ ದಾಳಿಗೂ ನಮ್ಮ ತಂದೆ ಹಾರಿಸ್ ಅವರಿಗೂ ಯಾವುದೇ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 2021ರಲ್ಲಿ ಇಡಿಯಲ್ಲಿ ಇಸಿಐಆರ್ (ECIR) ದಾಖಲಾಗಿತ್ತು. ಈಗ 2026ರಲ್ಲಿ ಇಡಿ ಅಧಿಕಾರಿಗಳು ನಮ್ಮ ಮನೆ ಮೇಲೆ ದಾಳಿ ನಡೆಸಿದ್ದಾರೆ. ಯಾರಾದರೂ ಕ್ರೈಮ್ ಮಾಡಿದ್ದರೆ ಆರು ವರ್ಷಗಳ ಕಾಲ ಸಾಕ್ಷ್ಯಗಳನ್ನು ಇಟ್ಟುಕೊಂಡು ಮನೆ ಶೋಧ ಮಾಡಲು ಕಾಯುತ್ತಾರಾ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ತಂದೆ ಸಚಿವ ಸ್ಥಾನ ಪಡೆಯುವುದನ್ನು ತಡೆಯಲು ರಾಜಕೀಯ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ. ಇಡಿ ಅಧಿಕಾರಿಗಳು ನಮ್ಮ ನಿವಾಸಕ್ಕೆ ಬಂದಿದ್ದು, ನಾವು ಹಾರಿಸ್ ಅವರ ಮಕ್ಕಳು ಮತ್ತು ಆ ಮನೆಯಲ್ಲಿ ವಾಸಿಸುತ್ತಿರುವುದರಿಂದ ಮಾತ್ರ. ಈ ಪ್ರಕರಣಕ್ಕೂ ಮತ್ತು ನಮ್ಮ ತಂದೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ತಮ್ಮ ತಂದೆಗೆ ಮಂತ್ರಿ ಸ್ಥಾನ ಸಿಗದಂತೆ ತಡೆಯಲು ಮತ್ತು ಅವರ ಮೇಲೆ ಗೂಬೆ ಕೂರಿಸುವ ಉದ್ದೇಶದಿಂದ ನಡೆದಿದೆ ಎಂದು ನಲಪಾಡ್ ಆರೋಪಿಸಿದ್ದಾರೆ. ಇದು ರಾಜಕೀಯ ಪ್ರೇರಿತವಾಗಿದ್ದು, ಕೇಂದ್ರದ ಬಿಜೆಪಿಯವರು ತಮ್ಮ ಕುಟುಂಬವನ್ನು ಗುರಿಯಾಗಿಸಿಕೊಂಡಿದ್ದಾರೆ. ಬಿಟ್‌ಕಾಯಿನ್ ಪ್ರಕರಣದ ಕುರಿತು 2020 ರಲ್ಲಿ ಸದನದಲ್ಲಿ ಬಿಜೆಪಿಯೇ ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳಿತ್ತು. ಅಲ್ಲದೆ, ಎಸ್‌ಐಟಿ ತನಿಖೆಯಲ್ಲೂ ಯಾವುದೇ ರೀತಿಯ ಅಕ್ರಮಗಳು ಪತ್ತೆಯಾಗಿಲ್ಲ. ಆದರೂ ಈಗ ನನ್ನ ಮತ್ತು ಸಹೋದರನ ಮೇಲೆ ದಾಳಿ ನಡೆಸಲಾಗಿದೆ. ಇದು ರಾಜಕೀಯ ಪ್ರೇರಿತವಾದ ದಾಳಿ ಎಂದು ಕಿಡಿಕಾರಿದರು.
ಇಡಿಯವರು ದಾಳಿ ನಡೆಸಿದ್ದಾರೆ. ಅವರ ಕೆಲಸ ಅವರು ಮಾಡಿದ್ದಾರೆ. ಸುಮಾರು 21 ಗಂಟೆಗಳ ಕಾಲ ಸರ್ಚ್ ಮಾಡಿ ಬರಿ ಎರಡು ಮೊಬೈಲ್ ಗಳನ್ನು ಮಾತ್ರ ತೆಗೆದುಕೊಂಡಿದ್ದಾರೆ. ಯಾವುದೇ ನಯಾಪೈಸೆ ಕೂಡ ಅವರಿಗೆ ಪತ್ತೆಯಾಗಿಲ್ಲ ಎಂದರು.
ಇದೇ ವೇಳೆ ನಾನು ಒಬ್ಬ ಒಳ್ಳೆಯ ಮಗನಂತೂ ಆಗಲು ಸಾಧ್ಯವಾಗಿಲ್ಲ. ಯಾವಾಗಲೂ ನನ್ನ ತಂದೆ ತಾಯಿಗೆ ನನ್ನಿಂದ ಕೆಟ್ಟದ್ದೇ ಆಗಿದೆ ಎಂದು ಭಾವುಕರಾಗಿದರು. ನಾನು ಕಷ್ಟಪಟ್ಟು ಯೂತ್ ಕಾಂಗ್ರೆಸ್ ಅಧ್ಯಕ್ಷನಾಗಿ ಉತ್ತಮ ಕೆಲಸ ಮಾಡಿ, ಪೋಷಕರಿಗೆ ಒಳ್ಳೆಯ ಹೆಸರು ತರಲು ಪ್ರಯತ್ನಿಸುತ್ತಿದ್ದೇನೆ. ನಮ್ಮ ತಂದೆಯಂತೆ ಉತ್ತಮ ಮಗನಾಗಿ ಬಾಳಲು ಪ್ರಯತ್ನಿಸುತ್ತಿದ್ದರೂ, ಯಾವುದೋ ಒಂದು ಕೇಸ್ ಇಟ್ಟುಕೊಂಡು ಪ್ರತಿ ಬಾರಿ ಇಂತಹ ನಮ್ಮ ಕುಟುಂಬವನ್ನು ಗುರಿಯಾಗಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು