12:16 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

22/04/2026, 00:04

ಮೂಡುಬಿದಿರೆ(reporterkarnataka.com): ಸಂಘಟನೆಗಳು ಸಂಸ್ಥೆಗಳಾಗಿ ಮುಂದೆ ಸಾಗಿದಾಗ ಸಂಘಟನೆಯ ಶಕ್ತಿಗೆ ಬೆಲೆ ಬರುತ್ತದೆ. ಈ ಸಹಕಾರ ಸಂಘವು ಕೇವಲ ಬ್ಯಾಂಕಿಂಗ್ ವ್ಯವಹಾರವಷ್ಟೆ ಅಲ್ಲದೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿರುವುದು ಗಮನಾರ್ಹ ಸಂಗತಿಯಾಗಿದೆ ಎಂದು ರಾಜ್ಯ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಶ್ರೀ ಐ. ತಾರಾನಾಥ ಪೂಜಾರಿ ಅವರು ಹೇಳಿದರು.
ಮಂಗಳೂರಿನ ಪಡೀಲ್ ನಲ್ಲಿ ಸ್ವಂತ ಆಡಳಿತ ಕಟ್ಟಡ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 35ನೇ ಶಾಖೆಯನ್ನು ಮೂಡುಬಿದಿರೆ ಅಂಚೆ ಕಚೇರಿ ಎದುರಿನ ರಾಮಯ್ಯ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ನಡವಳಿಕೆ ಹಾಗೂ ಉತ್ತಮ ಉದ್ದೇಶವಿದ್ದರೆ ಮತ್ತಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಎಚ್ಚರಿಕೆ ಅಗತ್ಯವಾಗಿದ್ದು, ವ್ಯಾಜ್ಯಗಳಿಂದ ಆದಷ್ಟು ದೂರವಿರಬೇಕು ಎಂದರು.
ಮೂಲ್ಕಿ- ಮೂಡಬಿದ್ರಿ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಶುಭ ಹಾರೈಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳಾ ಸಬಲೀಕರಣದ ಜತೆಗೆ ಆರ್ಥಿಕವಾಗಿ ಹಿಂದುಳಿದವರಿಗೆ ಹಾಗೂ ಹೆಣ್ಣು ಮಕ್ಕಳ ಮದುವೆಗೆ ಸಾಲ ನೀಡಲಾಗುತ್ತಿದೆ. ಶಿಕ್ಷಣ, ಸಾಮಾಜಿಕ ಸೇವೆಗಳಿಗೂ ಈ ಸಂಸ್ಥೆ ಆದ್ಯತೆ ನೀಡುತ್ತಿದೆ. ಶೇ.95ರಷ್ಟು ಮಂದಿ ಮಹಿಳಾ ಸಿಬ್ಬಂದಿ ಇಲ್ಲಿದ್ದು, ದಕ್ಷ ಆಡಳಿತ ಮಂಡಳಿಯೂ ಇದೆ ಎಂದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿರುವ ಶ್ರೀ ಐ. ತಾರನಾಥ ಪೂಜಾರಿ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.100 ಅಂಕ ಗಳಿಸಿದ ದಿಶಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಲಿ.) ಮಂಗಳೂರು. ಇದರ ನಿರ್ದೇಶಕರಾದ “ಸಹಕಾರ ರತ್ನ” ಶ್ರೀ ಭಾಸ್ಕರ್ ಎಸ್ ಕೋಟ್ಯಾನ್, ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಮೂಡಬಿದ್ರಿಯ ಅಧ್ಯಕ್ಷರಾದ ಶ್ರೀ ಸುರೇಶ್ ಕೆ. ಪೂಜಾರಿ, ವಕೀಲರ ಸಂಘ ಮೂಡಬಿದ್ರಿಯ ಅಧ್ಯಕ್ಷರಾದ ಶ್ರೀ ಹರೀಶ್ ಪಿ. ಯುವವಾಹಿನಿ (ರಿ.) ಮೂಡಬಿದ್ರಿ ಘಟಕದ ಅಧ್ಯಕ್ಷರಾದ ಶ್ರೀ ಗಿರೀಶ್ ಕೋಟ್ಯಾನ್ ಮಾರೂರು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಳ್ತಂಗಡಿಯ ಉಪಾಧ್ಯಕ್ಷರಾದ ಶ್ರೀ ಜಗದೀಶ್ಚಂದ್ರ ಡಿ.ಕೆ, ಪ್ರೆಸ್ ಕ್ಲಬ್ ಮೂಡಬಿದ್ರಿಯ ಅಧ್ಯಕ್ಷರಾದ ಶ್ರೀ ಸೀತಾರಾಮ್ ಆಚಾರ್ಯ, ಆತ್ಮಶಕ್ತಿ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ ಎನ್., ಶ್ರೀ ರಾಮನಾಥ ಸನಿಲ್, ಶ್ರೀ ಮುದ್ದುಮೂಡುಬೆಳ್ಳೆ, ಶ್ರೀ ದಿವಾಕರ ಬಿ.ಪಿ. ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯಾ ವಿಜಯ್ ಅವರು ಸ್ವಾಗತಿಸಿದರು. ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪೂಜಾರಿ ಅವರು ವಂದಿಸಿದರು. ಶ್ರೀ ವಿಶ್ವನಾಥ ರೆಂಜಾಳ ಅವರು ನಿರೂಪಿಸಿದರು.

ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು