4:11 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಿವಮೊಗ್ಗದಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು: ಮತ್ತೊಬ್ಬ ಆರೋಪಿಗೆ 6 ವರ್ಷ ಸಜೆ

22/04/2026, 11:12

ಶಿವಮೊಗ್ಗ(reporterkarnataka.com): ಶಿವಮೊಗ್ಗ ಜಿಲ್ಲೆಯ ತುಂಗಾ ತೀರದಲ್ಲಿ ನಡೆದಿದ್ದ ಭೀಕರ ಸ್ಫೋಟದ ತಾಲೀಮು (ಟ್ರಯಲ್ ಬ್ಲಾಸ್ಟ್) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ವಿಶೇಷ (NIA) ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.
ಪ್ರಕರಣದ ಮೂರನೇ ಅಪರಾಧಿ ಅರಾಫತ್ ಅಲಿಗೆ ನ್ಯಾಯಾಲಯವು 6 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣವು ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ (NIA), ಅರಾಫತ್ ಅಲಿ ವಿರುದ್ಧ ಗಂಭೀರ ಸಾಕ್ಷ್ಯಾಧಾರಗಳನ್ನು ಕಲೆಹಾಕಿತ್ತು. ನಿಷೇಧಿತ ಐಸಿಸ್ ಉಗ್ರ ಸಂಘಟನೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಅರಾಫತ್, ದೇಶವಿರೋಧಿ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದನು.
ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡುವುದು ಮಾತ್ರವಲ್ಲದೆ, ಸ್ಥಳೀಯ ಯುವಕರನ್ನು ದಾರಿ ತಪ್ಪಿಸಿ ಸಂಘಟನೆಯತ್ತ ಸೆಳೆಯುತ್ತಿದ್ದ ಗಂಭೀರ ಆರೋಪ ಈತನ ಮೇಲಿತ್ತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಅರಾಫತ್ ಅಲಿ ಮೇಲಿನ ದೋಷಾರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ಪ್ರಕಟಿಸಿದ್ದಾರೆ.
ಈ ಭಯೋತ್ಪಾದಕ ಸಂಚಿಗೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಒಟ್ಟು 12 ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ಪೈಕಿ ಈಗಾಗಲೇ ಇಬ್ಬರು ಆರೋಪಿಗಳಿಗೆ ತಲಾ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದೀಗ ಅರಾಫತ್ ಅಲಿ ಶಿಕ್ಷೆಗೊಳಗಾದ ಮೂರನೇ ವ್ಯಕ್ತಿಯಾಗಿದ್ದಾನೆ.
ಉಳಿದ 9 ಮಂದಿ ಆರೋಪಿಗಳ ವಿರುದ್ಧದ ವಿಚಾರಣೆಯು ನ್ಯಾಯಾಲಯದಲ್ಲಿ ಪ್ರಗತಿಯಲ್ಲಿದ್ದು, ಪ್ರಕರಣದ ಅಂತಿಮ ಹಂತದ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ. ದೇಶದ ಭದ್ರತೆಗೆ ಧಕ್ಕೆ ತರುವ ಇಂತಹ ಕೃತ್ಯಗಳಲ್ಲಿ ತೊಡಗುವವರಿಗೆ ಈ ತೀರ್ಪು ಒಂದು ಎಚ್ಚರಿಕೆಯ ಸಂದೇಶವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು