3:18 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು

23/04/2026, 17:14

ಮಡಿಕೇರಿ(reporterkarnataka.com): ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಆರೋಪದ ಮೇಲೆ ಪೊನ್ನoಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿಯ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇ ಮಾಲೀಕ ಸೇರಿದಂತೆ ಇಬ್ಬರು ಬಂಧನಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಹೋಂ ಸ್ಟೇ ನಡೆಸಲು ನೀಡಲಾಗಿದ್ದ ಪರವಾನಗಿಯನ್ನು ರದ್ದು ಪಡಿಸಿ ಆದೇಶ ಹೊರಡಿಸಿದ್ದಾರೆ.
ಕುಟ್ಟ ಗ್ರಾಮದ ಪಿ.ಎ. ಪೊನ್ನಪ್ಪ ಎಂಬುವರಿಗೆ ದೇವಿ ವಿಲ್ಲಾ ಹೋಂ ಸ್ಟೇ ನಡೆಸಲು 2024 ರ ಜನವರಿ 15ರಂದು ಪ್ರವಾಸೋದ್ಯಮ ಇಲಾಖೆಯಿಂದ ಪರವಾನಗಿ ನೀಡಲಾಗಿದೆ. ಇದೇ ತಿಂಗಳು 12 ರಂದು ಹೋಂ ಸ್ಟೇ ನಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದರಿಂದ ಕುಟ್ಟ ಪೊಲೀಸರು ಸ್ಟೇ ಮಾಲೀಕ ಹಾಗೂ ನೌಕರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೋಂ ಸ್ಟೇ ಪರವಾನಗಿ ರದ್ದು ಗೊಳಿಸುವಂತೆ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗೆ ಶಿಫಾರಸ್ಸು ಮಾಡಿದ್ದು, ಈ ಹಿನ್ನಲೆಯಲ್ಲಿ ಸಮಿತಿ ಅಧ್ಯರಾಗಿರುವ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಪರವಾನಗಿ ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು