11:14 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್ ಕುಮಾರಸ್ವಾಮಿ

23/04/2026, 17:17

ಬೆಂಗಳೂರು(reporter Karnataka.com): ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಮ್ಮನೇ ಮಾಧ್ಯಮದಲ್ಲಿ ಬರ್ತಿರುವ ವಿಚಾರ ಅದು. ಅವರು ಈಗಾಗಲೇ ಈ ವಿಚಾರಕ್ಕೆ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಸ್ಥಾನಮಾನ ಕೊಟ್ಟಿದೆ. ಅವರ ಬಗ್ಗೆ ಚರ್ಚೆ ಬೇಡ, ನಮ್ಮ ಪಾರ್ಟಿ ಕಟ್ಟೋಕೆ ಕಾರ್ಯಕರ್ತರಿದ್ದಾರೆ. ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಸಿದ್ಧರಿದ್ದಾರೆ. ಪಕ್ಷ ಯಾರನ್ನ ನೆಚ್ಚಿಕೊಂಡಿಲ್ಲ ಅಂತ ಜಮೀರ್‌ಗೆ ತಿರುಗೇಟು ಕೊಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಮಾಡಿದ್ದಾರೆ ಎಂಬ ಮಾಜಿ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಮಾಟ ಮಂತ್ರದ ಬಗ್ಗೆ ಅಷ್ಟು ಅರಿವಿಲ್ಲ. ನಾವು ದೈನಂದಿನ ಜೀವನದಲ್ಲಿ ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ನಮ್ಮಿಂದ ನಾಲ್ಕು ಜನರಿಗೆ ಒಳ್ಳೆಯದು ಆಗಬೇಕು ಎಂದು ತಿಳಿಸಿದ್ದಾರೆ. ಅಲ್ಪಸಂಖ್ಯಾತರು ಜೆಡಿಎಸ್ ಕಡೆಗೆ ಮುಖ ಮಾಡುವ ವಿಚಾರವಾಗಿ ಮಾತನಾಡಿ, ಸಿಎಂ ಅವರು ಯಾವಾಗಲೂ ಅಹಿಂದ ರಾಜಕಾರಣಿ ಅಂತ ಹೇಳ್ತಾರೆ. ಅಹಿಂದದಲ್ಲಿ ಅ ಮತ್ತು ದ ಅನ್ನೋದು ಉರುಳಿ ಹೋಗಿದೆ. ರಾಜಣ್ಣ, ನಾಗೇಂದ್ರ ಅವರನ್ನ ಸಚಿವ ಸಂಪುಟದಿಂದ ಕೈಬಿಟ್ಟಾಗಿದೆ. ಜಬ್ಬಾರ್, ನಜೀರ್ ತಲೆದಂಡ ಆಗಿದೆ. ದಾವಣಗೆರೆಯಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿದ್ದಾರೆ. ಆ ಕ್ಷೇತ್ರದಲ್ಲಿ ಮುಸ್ಲಿಂ ಬಾಂದವರಿಗೆ ಟಿಕೆಟ್ ಕೊಡಬೇಕಿತ್ತು. ಅಲ್ಲಿ ಜಬ್ಬಾರ್, ನಜೀರ್ ಕೈ ಬಿಟ್ಟಿದ್ದಾರೆ. ಅಹಿಂದದಲ್ಲಿ ಅ-ಅಲ್ಪಸಂಖ್ಯಾತ, ದ-ದಲಿತ ಹೋಗಿದೆ. ಉಳಿದಿರೋದು ಹಿಂದುಳಿದ ಅನ್ನೋದು, ಅದು ಯಾವಾಗ ಹೋಗುತ್ತದೆ ಗೊತ್ತಿಲ್ಲ. ಸಂಪೂರ್ಣ ಅಹಿಂದ ಛಿದ್ರಗೊಳ್ಳುತ್ತದೆಯೋ ಗೊತ್ತಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು