1:23 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ: ಡೆತ್  ನೋಟ್ ನಲ್ಲಿ ಅವರು ಬರೆದದ್ದೇನು? 

14/09/2021, 23:00

ಉಡುಪಿ(reporterkarnataka.com): ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಮಂಗಳವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಶಾ ಶೆಟ್ಟಿ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಅವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದು ಬಂದಿದೆ. 

ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. 

ಕಣ್ಣುಗಳು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ಸಹಕರಿಸಿದರು. ಘಟನಾ ಸ್ಥಳಕ್ಕೆ ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಕಾರ್ಯದರ್ಶಿ ರಕ್ಷಿತಾ ಶೆಟ್ಟಿ, ಹಾಗೂ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಗ್ರಾಹಕ ಸಂಪರ್ಕ ಅಧಿಕಾರಿ ಹಫೀಜ್ ರೆಹಮಾನ್ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು