12:19 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕರ ಹೇಳಿಕೆಯಿಂದ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ ಸಚಿವ ಶ್ರೀರಾಮುಲು

23/04/2026, 21:15

ಗಣೇಶ್ ಇನಾಂದಾರ್ ಬಳ್ಳಾರಿ

info.reporterkarnataka@gmail.com

ದೇಶದ ಪ್ರಧಾನಮಂತ್ರಿ ಯನ್ನು ಟೆರರಿಸ್ಟ್ ಎಂದು ಕರೆಯುವ ಮೂಲಕ ಕಾಂಗ್ರೆಸ್ ನಾಯಕರು ಪ್ರಜಾಪ್ರಭುತ್ವದ
ಮೌಲ್ಯಗಳಿಗೆ ಧಕ್ಕೆ ತಂದಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ತೀವ್ರ ವಾಗ್ದಾಳಿ ನಡೆಸಿದರು.
ಬಳ್ಳಾರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಇಂತಹ ಹೇಳಿಕೆಗಳು ದೇಶದ ರಾಜಕೀಯ ಸಂಸ್ಕøತಿಗೆ ಹಾನಿ ಉಂಟುಮಾಡುತ್ತವೆ ಎಂದ ಅವರು ಹಾಗೆಯೇ ಯಾಸಿನ್ ಮಲಿಕ್ ಅವರಂತಹ ವ್ಯಕ್ತಿಗಳನ್ನು ಸನ್ಮಾನಿಸುವ ಕಾಂಗ್ರೆಸ್ ನಾಯಕತ್ವದ ನಡೆ ಪ್ರಶ್ನಾರ್ಹವಾಗಿದೆ ಎಂದು ಆರೋಪಿಸಿದರು.
ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವು ಸ್ಪಷ್ಟವಾಗಿಲ್ಲದೆ, ಮಹಿಳೆಯರಿಗೆ ನಿಜವಾದ ನ್ಯಾಯ ಒದಗಿಸುವ ಬದಲು ಕೇವಲ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದರು.
ಶೇಕಡಾ 33 ಮಹಿಳಾ ಮೀಸಲಾತಿ ದೇಶದ ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಮಹತ್ವದ ಹೆಜ್ಜೆಯಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಈ ಮಹತ್ವದ ಕ್ರಮಕ್ಕೂ ವಿರೋಧ ವ್ಯಕ್ತಪಡಿಸುತ್ತಿರುವುದು ಅವರ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದು ಆರೋಪಿಸಿದರು.
ಮಹಿಳಾ ಸಬಲೀಕರಣದ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್ ನಾಯಕರು, ವಾಸ್ತವದಲ್ಲಿ ಮಹಿಳೆಯರ ಹಕ್ಕುಗಳನ್ನು ಕಾಪಾಡಲು ವಿಫಲರಾಗಿದ್ದಾರೆ. ಮಹಿಳೆಯರ ಅಭಿವೃದ್ಧಿಗೆ ಅಗತ್ಯವಾದ ನೀತಿಗಳನ್ನು ಜಾರಿಗೆ ತರುವಲ್ಲಿ ಅವರು ಆಸಕ್ತಿ ತೋರಿಸಿಲ್ಲ
ಎಂದು ಹೇಳಿದರು.
ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಅವಕಾಶ ಕಲ್ಪಿಸುವಲ್ಲಿ ಮುಂದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ್ ಮೋತ್ಕರ್,ಗುರುಲಿಂಗನ ಗೌಡ, ಗುಡಿಗಂಟಿ ಹನುಮಂತ,ವೆಂಕಟರಾಮಿರೆಡ್ಡಿ, ಹನುಮಂತಪ್ಪ, ಉಜ್ವಲ
ಶ್ರೀಧರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು