8:51 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ

23/04/2026, 21:33

ಗಣೇಶ ಇನಾಂದಾರ್ ಬಳ್ಳಾರಿ

info.reporterkarnataka@gmail.com

ಸರ್ಕಾರಿ ಜಮೀನು ಒತ್ತುವರಿ ವಿರುದ್ಧದ ಕಾರ್ಯಾಚರಣೆಯನ್ನು ಬಳ್ಳಾರಿ ಜಿಲ್ಲಾಡಳಿತದಿಂದ ಮೂರನೇ ಹಂತದ ತೆರವು ಕಾರ್ಯಾಚರಣೆಯಲ್ಲಿ ದೊಡ್ಡ ಜಾಗವೊಂದನ್ನು ತನ್ನ ಸುಪರ್ದಿಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ನಗರದ ಸರ್ಕಾರಿ ಜಮೀನುಗಳನ್ನು ಕೆಲ ಪಟ್ಟಭದ್ರರು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನಿರ್ದೇಶನದ ಮೇರೆಗೆ ಜಿಲ್ಲಾಡಳಿತವು ಸರ್ಕಾರಿ ಜಮೀನು ರಕ್ಷಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್‌ ಝುಬೇರ ನೇತೃತ್ವದಲ್ಲಿ ಸಮಿತಿ ರಚಿಸಿದೆ.
ಅಂದ್ರಾಳ್ ಗ್ರಾಮದ ಬೈಪಾಸ್‌ ಬಳಿಯ ಸರ್ವೇ ನಂಬರ್ 101ರಲ್ಲಿ ಒಟ್ಟು 46 ಎಕರೆ ಜಮೀನು ಇದ್ದು, ಈ ಪೈಕಿ ಸರ್ಕಾರಿ ಯೋಜನೆ ಮತ್ತು ಸ್ಮಶಾನದ ಉದ್ದೇಶಕ್ಕಾಗಿ 13 ಎಕರೆಯಷ್ಟು ಜಾಗ ಮೀಸಲಿಡಲಾಗಿದೆ. ಇನ್ನುಳಿದ ಜಮೀನಿನಲ್ಲಿ ಕೆಲ ಪಟ್ಟಭದ್ರರು ಸಿಮೆಂಟ್‌ ಇಟ್ಟಿಗೆ ಕಾರ್ಖಾನೆ ಮತ್ತು ಇತರ ನಿರ್ಮಿತಿಗಳನ್ನು ಮಾಡಿಕೊಳ್ಳಲಾಗಿತ್ತು. ಇದನ್ನು ಸಮಿತಿ ತೆರವು ಮಾಡಿತು.
ಬೆಳಿಗ್ಗೆ 6.30ಕ್ಕೆ ಆರಂಭವಾದ ತೆರವು ಕಾರ್ಯಾಚರಣೆ 9.30ರವರೆಗೆ ನಡೆಯಿತು. ಈ ವೇಳೆ ಕೆಲ ಮಂದಿ ಸ್ಥಳಕ್ಕೆ ಬಂದು ಪ್ರತಿಭಟಿಸುವ ಬೆದರಿಕೆ ಹಾಕಿದರು. ಆದರೂ ಅಧಿಕಾರಿಗಳು ಇದ್ಯಾವುದಕ್ಕೂ ಜಗ್ಗದೇ ಕಾರ್ಯಾಚರಣೆ ಮುಂದುವರಿಸಿದರು.
ಅಂದ್ರಾಳುವಿನ ಇದೇ ಜಮೀನನ 4 ಎಕರೆಯನ್ನು ಕಬಳಿಸಿದ ಆರೋಪದ ಮೇಲೆ ಪಾಲಿಕೆ ದುರುಗಣ್ಣ ಎಂಬುವವರೂ ಸೇರಿದಂತೆ ಹಲವರ ಮೇಲೆ ಈಗಾಗಲೇ ಎಫ್‌ಐಆರ್‌ ದಾಖಲು ಮಾಡಿದೆ. ಈ ವಿಚಾರ ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ಸದ್ದು ಮಾಡಿತ್ತು.
ಕಾರ್ಯಾಚರಣೆ ಬಗ್ಗೆ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ‘ಜಿಲ್ಲಾಡಳಿತದ ಈ ದಿಟ್ಟ ಕ್ರಮವು ಸರ್ಕಾರಿ ಆಸ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಈ ಒತ್ತುವರಿಯ ಹಿಂದೆ ಯಾರೇ ಇದ್ದರೂ ಮತ್ತು ಯಾರು ಪ್ರಚೋದನೆ ನೀಡುತ್ತಿದ್ದರೂ ಅವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು.

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು
ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ., ಡಿಡಿಎಲ್‌ಆರ್ ಪ್ರಮೋದ್ ಸೇರಿದಂತೆ ಬಳ್ಳಾರಿ ತಾಲ್ಲೂಕು ತಹಶೀಲ್ದಾರ್ ಕಚೇರಿ ಅಧಿಕಾರಿ- ಸಿಬ್ಬಂದಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು