6:40 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನ | ಚಾಮರಾಜನಗರ: ರಣ ಬಿಸಿಲಿಗೆ ಹೆಣ್ಣಾನೆ ಬಲಿ

23/04/2026, 23:05

ಚಾಮರಾಜನಗರ(reporterkarnataka.com): ರಾಜ್ಯದಲ್ಲಿ ಬಿಸಿಲಿನ ಪರಿಣಾಮ ಹೆಚ್ಚಾಗುತ್ತಿದೆ. ಈ ಬಿಸಿಯನ್ನು ಮನುಷ್ಯರಿಗೂ ತಡೆಯಲಾಗುತ್ತಿಲ್ಲ. ಇನ್ನು ಪಾಪ ಮೂಕ ಪ್ರಾಣಿಗಳಿಗೆ ತಡೆದುಕೊಳ್ಳಲು ಹೇಗೆ ಸಾಧ್ಯ. ಪ್ರಾಣಿಗಳಿಗೆ ಮನುಷ್ಯರಿಗಿಂತ ಬಾಯರಿಕೆ ಹೆಚ್ಚು.ಹಾಗಾಗಿ ದೊಡ್ಡ ನದಿ, ಕರೆಗಳನ್ನು ಅರಸಿಕೊಂಡು ಬರುತ್ತದೆ. ಅದರಲ್ಲೂ ದೈತ್ಯ ಗಾತ್ರದ ಪ್ರಾಣಿಯಾಗಿರುವ ಆನೆಗಳಿಗೆ ನೀರು ಹೆಚ್ಚುಬೇಕು. ಇದೀಗ ಇಲ್ಲೊಂದು ಆನೆ ನೀರು ಕಡಿಯಲು ಬಂದು ಪ್ರಾಣ ಕಳೆದುಕೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನೀರು ಅರಸಿ ಬಂದು ಉಡುತೊರೆ ಹಳ್ಳದ ಕೆಸರಿನಲ್ಲಿ ಮೂರು ಕಾಡಾನೆಗಳು ಸಿಲುಕಿಕೊಂಡಿತ್ತು. ಇದರ ಪೈಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಒಂದು ಹೆಣ್ಣಾನೆ ಚಿಕಿತ್ಸೆ ಫಲಿಸದೆ ನಿನ್ನೆ ತಡರಾತ್ರಿ ಸಾವನ್ನಪ್ಪಿದೆ. ಕಳೆದ ಎರಡು ದಿನಗಳ ಹಿಂದೆ, ತೀವ್ರ ಬಿಸಿಲಿನಿಂದ ಬಸವಳಿದಿದ್ದ ಐದು ಆನೆಗಳ ಹಿಂಡು ನೀರು ಕುಡಿಯಲು ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯ ಉಡುತೊರೆ ಹಳ್ಳದ ಹಿನ್ನೀರಿಗೆ ಬಂದಿದ್ದವು. ಈ ವೇಳೆ ಮೂರು ಆನೆಗಳು ಕೆಸರಿನಲ್ಲಿ ಹೂತು ಹೋಗಿದ್ದವು. ಇದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಅದರ ರಕ್ಷಣೆಗೆ ಧಾವಿಸಿದ್ದಾರೆ. ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಸುಮಾರು 17 ಗಂಟೆಗಳ ಕಾಲ ಸಾಹಸಮಯ ಕಾರ್ಯಾಚರಣೆ ನಡೆಸಿದರು. ಈ ವೇಳೆ ಎರಡು ಆನೆಗಳು ಸುರಕ್ಷಿತವಾಗಿ ಕೆಸರಿನಿಂದ ಹೊರಬಂದು ಕಾಡಿನತ್ತ ಕಳುಹಿಸಲಾಗಿದೆ. ಆದರೆ, ಸುಮಾರು 25 ವರ್ಷ ಪ್ರಾಯದ ಹೆಣ್ಣಾನೆಯೊಂದು ತೀವ್ರ ಅಶಕ್ತತೆಯಿಂದಾಗಿ ಎದ್ದು ನಿಲ್ಲಲು ಸಾಧ್ಯವಾಗದೆ ಅಲ್ಲಿಯೇ ಉಳಿದುಕೊಂಡಿತ್ತು. ಅಸ್ವಸ್ಥಗೊಂಡಿದ್ದ ಆನೆಗೆ ನಾಗರಹೊಳೆ ಮತ್ತು ಮಲೆ ಮಹದೇಶ್ವರ ವನ್ಯಧಾಮದ ಪಶುವೈದ್ಯರು ಸ್ಥಳದಲ್ಲೇ ಗ್ಲೂಕೋಸ್ ಮತ್ತು ತುರ್ತು ಚಿಕಿತ್ಸೆ ನೀಡಿದ್ದರು. ಜೆಸಿಬಿ ಮತ್ತು ಕ್ರೇನ್‌ಗಳ ಸಹಾಯದಿಂದ ಆನೆಯನ್ನು ಎಬ್ಬಿಸುವ ಪ್ರಯತ್ನ ಮಾಡಿದರೂ ಅದು ಯಶಸ್ವಿಯಾಗಲಿಲ್ಲ. ನಿರ್ಜಲೀಕರಣ ಮತ್ತು ಬಿಸಿಲಿನ ತಾಪದಿಂದ ತೀವ್ರವಾಗಿ ಬಳಲಿದ್ದ ಆನೆ, ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದೆ ಎಂದು ಅರಣ್ಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು