7:53 PM Friday9 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಶಿಕ್ಷಣದಲ್ಲಿ ನಿಮ್ಮ ಜಿಲ್ಲೆ ಸಾಧನೆ ಏನು: ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದ ಶಾಸಕ ಡಾ. ಭರತ್ ಶೆಟ್ಟಿ

23/04/2026, 23:14

ಮಂಗಳೂರು(reporterkarnataka.com): ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಕಲ್ಬುರ್ಗಿ ಜಿಲ್ಲೆಗಳ ಸಾಧನೆ ಕುರಿತು
ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯನ್ನು ಸದಾ ಟೀಕಿಸುತ್ತಿರುವ ಪ್ರಿಯಾಂಕ ಖರ್ಗೆ ಇನ್ನಾದರೂ ತಮ್ಮ ಜಿಲ್ಲೆಯಲ್ಲಿ ಉಳಿದುಕೊಂಡು ಶಿಕ್ಷಣ ಕ್ಷೇತ್ರವನ್ನು ಮೇಲಕ್ಕೆತ್ತಲು ಶ್ರಮವಹಿಸಬೇಕು ಎಂದು ಭರತ್ ಶೆಟ್ಟಿ ಸಲಹೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದರೆ, ಕಲ್ಬುರ್ಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಎಂಬುದನ್ನು ಉಲ್ಲೇಖಿಸಿ, ಸಚಿವರ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಹಿಂದುಳಿದಿದೆ ಎಂದು ಟೀಕಿಸಿದ್ದಾರೆ.
ಸಚಿವರು ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ತಮ್ಮ ಜಿಲ್ಲೆಯ ಅಭಿವೃದ್ಧಿಯ ಕಡೆ ಗಮನಹರಿಸಬೇಕು ಎಂದು ಅವರು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಮುಂದಿದ್ದು, ಕಲ್ಬುರ್ಗಿ ಜಿಲ್ಲೆ ಇನ್ನೂ ಅನೇಕ ವಿಷಯಗಳಲ್ಲಿ ಹಿಂದೆ ಉಳಿದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ, ಐಟಿ ಸಚಿವರಾಗಿ ತಮ್ಮ ಜಿಲ್ಲೆಗೆ ನೀಡಿದ ಕೊಡುಗೆಗಳ ಬಗ್ಗೆ ಪ್ರಶ್ನೆ ಎತ್ತಿದ ಅವರು, ಜಿಲ್ಲೆಯ ಅಭಿವೃದ್ಧಿಯ ಮೂಲಕ ನಿಮ್ಮ ಸಾಮರ್ಥ್ಯ ತೋರಿಸಿ ಎಂದು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು