8:27 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ರಾಜ್ಯದ ಗ್ರಾಪಂ ಚುನಾವಣೆಗೆ’ ಭರ್ಜರಿ ಸಿದ್ಧತೆ: ವಾರ್ಡ್ ಸಂಖ್ಯೆ 94 ಸಾವಿರಕ್ಕೆ ಏರಿಕೆ

24/04/2026, 09:34

ಬೆಂಗಳೂರು(reporterkarnataka.com): ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದ ತಳಹದಿಯಾಗಿರುವ ಗ್ರಾಮ ಪಂಚಾಯತಿಗಳ ಚುನಾವಣೆಗೆ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ರಾಜ್ಯದ 31 ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತಿ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಬಾರಿ ಒಟ್ಟು ಸದಸ್ಯರ ಸಂಖ್ಯೆ 94 ಸಾವಿರಕ್ಕೆ ಏರಿಕೆಯಾಗಲಿದೆ. 2020ರ ಚುನಾವಣೆಯಲ್ಲಿ ರಾಜ್ಯದ 5,728 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 91,339 ಸದಸ್ಯ ಸ್ಥಾನಗಳಿದ್ದವು. ಈ ಬಾರಿ 5,700ಕ್ಕೂ ಹೆಚ್ಚು ಪಂಚಾಯತಿಗಳಿಗೆ ಒಟ್ಟು 94,081 ಸದಸ್ಯ ಸ್ಥಾನಗಳನ್ನು ಪ್ರಸ್ತಾವಿಸಲಾಗಿದೆ.
ಹೆಚ್ಚು ಸ್ಥಾನ ಹೊಂದಿರುವ ಜಿಲ್ಲೆಗಳು: ಬೆಳಗಾವಿ ಜಿಲ್ಲೆಯು ಅತಿ ಹೆಚ್ಚು ಅಂದರೆ 8,413 ಸದಸ್ಯ ಸ್ಥಾನಗಳನ್ನು ಹೊಂದಿದ್ದು, ಅಗ್ರಸ್ಥಾನದಲ್ಲಿದೆ. ತುಮಕೂರು (5,228) ಮತ್ತು ಕಲಬುರಗಿ (4,429) ನಂತರದ ಸ್ಥಾನಗಳಲ್ಲಿವೆ.
ಕಡಿಮೆ ಸ್ಥಾನಗಳು: ಕೊಡಗು ಜಿಲ್ಲೆಯಲ್ಲಿ 102 ಪಂಚಾಯತಿಗಳಿಂದ 1,200 ಸದಸ್ಯರಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ ಕೇವಲ 85 ಗ್ರಾಮ ಪಂಚಾಯತಿಗಳಿದ್ದು 2,047 ಸದಸ್ಯರಿದ್ದಾರೆ.

*ಕ್ಷೇತ್ರ ಮರುವಿಂಗಡಣೆ ಮತ್ತು ಆಕ್ಷೇಪಣೆ*
ಕರ್ನಾಟಕ ಪಂಚಾಯತ್ ರಾಜ್ ಕ್ಷೇತ್ರ ಮರುವಿಂಗಡಣಾ ಆಯೋಗವು ಈ ಕರಡು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಶುಕ್ರವಾರದವರೆಗೆ ಕಾಲಾವಕಾಶ ನೀಡಲಾಗಿದೆ. ಅಂತಿಮ ಅಧಿಸೂಚನೆ ಹೊರಬಿದ್ದ ನಂತರ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಮಹಿಳೆಯರಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ನಡೆಯಲಿದೆ.

*ರಾಜಕೀಯ ಪಕ್ಷಗಳ ಸಿದ್ಧತೆ*
ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ರಂಗದಲ್ಲೂ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷವು ಗ್ರಾಮ ಮಟ್ಟದಲ್ಲಿ ತಮಗೆ ಇರುವ ಬೆಂಬಲದ ಕುರಿತು ಸಮೀಕ್ಷೆ ನಡೆಸುತ್ತಿದ್ದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕೂಡ ತಮ್ಮ ಕಾರ್ಯಕರ್ತರ ಮೂಲಕ ಹಳ್ಳಿಗಳಲ್ಲಿ ಸಿದ್ಧತೆ ಆರಂಭಿಸಿವೆ. ಪ್ರಸ್ತುತ ಪಂಚಾಯತಿಗಳಲ್ಲಿ ಆಡಳಿತಾಧಿಕಾರಿಗಳ ಆಡಳಿತವಿದ್ದು, ಶೀಘ್ರದಲ್ಲೇ ಚುನಾವಣೆ ನಡೆಸುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿಬರುತ್ತಿದೆ. ಈ ಕ್ಷೇತ್ರ ಮರುವಿಂಗಡಣೆಯ ಪ್ರಕ್ರಿಯೆಯು ಮುಕ್ತಾಯಗೊಂಡ ಕೂಡಲೇ ರಾಜ್ಯ ಚುನಾವಣಾ ಆಯೋಗವು ಮತದಾನದ ದಿನಾಂಕಗಳನ್ನು ಘೋಷಿಸುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು