2:11 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಧ್ಯರಾತ್ರಿ ಕುಡುಕರ ಹುಚ್ಚಾಟ; ಸರ್ಕಾರಿ ಬಸ್ ಅಡ್ಡಗಟ್ಟಿ ಸೆಲ್ಫಿಗಾಗಿ ಕಾಟ

24/04/2026, 20:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದಲ್ಲಿ ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಸರ್ಕಾರಿ ಬಸ್‌ನ್ನು ಅಡ್ಡಗಟ್ಟಿ ಹುಚ್ಚಾಟ ಮೆರೆದ ಘಟನೆ ನಡೆದಿದೆ.


ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್‌ನ್ನು ರಸ್ತೆ ಮಧ್ಯೆ ಆಟೋ ನಿಲ್ಲಿಸಿ ಅಡ್ಡಗಟ್ಟಿದ ದುಷ್ಕರ್ಮಿಗಳು, ಬಸ್ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವೇಳೆ ಬಸ್ ಚಾಲಕ ಮನವಿ ಮಾಡಿದರೂ ಕೇಳದೇ ಕೂಗಾಡುತ್ತಾ ರೌಡಿಸಂ ಪ್ರದರ್ಶಿಸಿದ್ದಾರೆ.
ಘಟನೆ ಕಳೆದ ರಾತ್ರಿ ಸುಮಾರು 12 ಗಂಟೆಗೆ ನಗರದ ಟೆಂಟರ್ ಚಿಕನ್ ಬಳಿ ನಡೆದಿದ್ದು, ಈ ದೃಶ್ಯಗಳು ಬಸ್‌ನಲ್ಲಿದ್ದ ಪ್ರಯಾಣಿಕರ ಮೊಬೈಲ್‌ಗಳಲ್ಲಿ ಸೆರೆಯಾಗಿವೆ.
ಮಧ್ಯರಾತ್ರಿ ಸಾರ್ವಜನಿಕ ರಸ್ತೆಯಲ್ಲಿ ಈ ರೀತಿ ಹುಚ್ಚಾಟ ಮೆರೆದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು