2:29 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

25/04/2026, 21:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತಂದೆ ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಅವಿವಾಹಿತೆ ಯುವತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಸೌಜನ್ಯ ಪೂಜಾರಿ (22) ನೇಣಿಗೆ ಶರಣಾದ ಯುವತಿ. ಸೌಜನ್ಯ ಅವರ ತಂದೆ ನಟೇಶ್ ಪೂಜಾರಿ ಅಲಿಯಾಜ್ ಗೋಪಾಲ ಅವರು, ಶನಿವಾರ ಬೆಳಗ್ಗೆ ತರಕಾರಿ ತಂದು ಮಗಳು ಸೌಜನ್ಯ ಅವರಿಗೆ ಸಾಂಬಾರು ಮಾಡುವಂತೆ ತಿಳಿಸಿ ಹೊರ ಹೋಗಿದ್ದರು. ಮಧ್ಯಾಹ್ನ 2 ಗಂಟೆಗೆ ಮನೆಗೆ ವಾಪಾಸು ಬಂದಾಗ ಸಾಂಬಾರು ಮಾಡಿಲ್ಲವೆಂಬ ಕಾರಣಕ್ಕೆ ಮಗಳಿಗೆ ಬೈದು ಪಕ್ಕದ ಮನೆಯಿಂದ ಸಾಂಬಾರ್ ತರಲು ತೆರಳಿದ್ದಾರೆ. ಈ ಸಮಯದಲ್ಲಿ ಸೌಜನ್ಯ ಮನೆ ಬಾಗಿಲು ಹಾಕಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಎಂಜಿಎಂ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು