3:00 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಸುಳ್ಯ: ಆಂಧ್ರ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

25/04/2026, 23:34

ಸುಳ್ಯ(reporterkarnataka.com): ಆಂದ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಅಪರಾಧಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
2012, ಜನವರಿ 31ರಂದು ಕಡಬ ಠಾಣಾ ವ್ಯಾಪ್ತಿಯ ಪುತ್ತೂರು, ಕೊಂಬಾರು ಗ್ರಾಮದ ಅಮೈತಡ್ಕ ಎಂಬಲ್ಲಿ, ಸಾರ್ವಜನಿಕ ರಸ್ತೆಯ ಸಮೀಪ ಮೋರಿಯ ಅಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ, ಕಡಬ ಪೊಲೀಸ್ ಠಾಣೆಯಲ್ಲಿ ಅ. ಕ್ರ : 15/2012, ಕಲಂ : 302.201 R/W 34 ಐ.ಪಿ.ಸಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಆಗಿನ ತನಿಖಾಧಿಕಾರಿಗಳಾಗಿದ್ದ ಎಂ.ಎನ್. ಅನುಚೇತ್ ಅವರು, ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿತನಾಗಿದ್ದ ಸುಳ್ಯ ಅಜ್ಜಾವರ ನಿವಾಸಿ ಎನ್. ಎಂ. ಅಬ್ದುಲ್ ಅಜೀಜ್ (30) ಎಂಬಾತನ ವಿರುದ್ದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ನ್ಯಾಯಾಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ವಿಜಯ್ ಕುಮಾರ್ ಎ ಪಾಟೀಲ್ ಅವರು ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ.2,೦೦,೦೦೦/- ದಂಡವನ್ನು ಪಾವತಿಸುವಂತೆ ಅದೇಶಿಸಿರುತ್ತದೆ. ಸರ್ಕಾರಿ ಅಭಿಯೋಜಕರಾಗಿದ್ದ ಕೆ.ಪಿ ಯಶೋಧ ರವರು ಮಾನ್ಯ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದಮಂಡನೆ ನಡೆಸಿರುತ್ತಾರೆ.
ಅಪರಾಧಿಯು ಶಿಕ್ಷೆ ಪ್ರಕಟವಾದ ಬಳಿಕ ದಸ್ತಗಿರಿಗೆ ಸಿಗದೇ, ತಲೆಮರೆಸಿಕೊಂಡಿದ್ದಾತನನ್ನು ಕಡಬ ಪೊಲೀಸ್ ಉಪನೀರಿಕ್ಷಕರಾದ ಜಂಬುರಾಜ್ ಮಹಾಜನ್ ಮತ್ತು ಠಾಣಾ ಸಿಬ್ಬಂದಿಗಳು ಆಂಧ್ರಪ್ರದೇಶದಲ್ಲಿ ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು