5:52 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಕುಂದಾಪುರ | ಅಸೋಡು ವಾರಾಹಿ ಕಾಲುವೆಗೆ ಬಿದ್ದ ಕಾಡುಕೋಣ ರಕ್ಷಣೆ

26/04/2026, 10:02

ಕುಂದಾಪುರ(reporterkarnataka.com):ಕುಂದಾಪುರ ಕಾಳಾವರ ಗ್ರಾ.ಪಂ. ವ್ಯಾಪ್ತಿಯ ಅಸೋಡು ಶ್ರೀ ಕುಮಾರ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ವಾರಾಹಿ ಕಾಲುವೆಯಲ್ಲಿ ಬಿದ್ದಿದ್ದ‌ ಭಾರೀ ಗಾತ್ರದ ಕಾಡುಕೋಣವನ್ನು ಸ್ಥಳೀಯರ ಸಹಕಾರದಿಂದ ಅರಣ್ಯ ಇಲಾಖೆ ಸಿಬಂದಿ ರಕ್ಷಿಸಿದ್ದಾರೆ.ನೀರು ಮತ್ತು ಆಹಾರ ಅರಸಿ ಸಮೀಪದ ಅರಣ್ಯ ಪ್ರದೇಶದಿಂದ ಜನವಸತಿ ಪ್ರದೇಶಕ್ಕೆ ಬಂದಿದ್ದ ಕಾಡುಕೋಣ ಶುಕ್ರವಾರ ಆಕಸ್ಮಿಕವಾಗಿ ಅಸೋಡಿನ ವಾರಾಹಿ ಕಾಲುವೆಗೆ ಬಿದ್ದಿತ್ತು. ಬರೋಬ್ಬರಿ 20 ತಾಸುಗಳ ಕಾಲ ಕಾಲುವೆಯಲ್ಲಿದ್ದ ಅದು ಕಾಲುವೆಯಿಂದ ಮೇಲಕ್ಕೆ ಬರಲು ಹರಸಾಹಸ ಮಾಡಿದ್ದರೂ ಸಾಧ್ಯವಾಗಿರಲಿಲ್ಲ.
ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿ, ಸ್ಥಳೀಯರ ಸಹಕಾರದಿಂದ ಶನಿವಾರ ಬೆಳಗ್ಗೆ ರಕ್ಷಣ ಕಾರ್ಯಾಚರಣೆ ಆರಂಭಿಸಿದ್ದರು.
ಕಾಳಾವರ ಗ್ರಾ.ಪಂ. ಮಾಜಿ ಸದಸ್ಯ ಚಂದ್ರ ಪೂಜಾರಿ ಕಾಳಾವರ, ವಲಯ ಅರಣ್ಯಾಧಿಕಾರಿ ರಾಘವೇಂದ್ರ ಮಾರ್ಗದರ್ಶನದಲ್ಲಿ ಉಪ ಅರಣ್ಯಾಧಿಕಾರಿಗಳಾದ ವಿನಯ್, ಗುರು ನಾಯ್ಕ್, ಸಿಬಂದಿ ಮಾಲತಿ, ರಂಜಿತ್, ಸುನೀಲ್ ಮತ್ತು ಅಶೋಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು