1:45 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ.ರೋಡ್ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ

26/04/2026, 13:44

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೆ.ಸಿ ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಹಾಗೂ ಕಣ್ಣಿನ ತಪಾಸಣಾ ಶಿಬಿರವು ಉಚ್ಚಿಲಸ್ ಕಾಂಪ್ಲೆಕ್ಸ್, ಸುಜಾತ ಜ್ಯುವೆಲ್ಲರಿ ಹತ್ತಿರ, ಕೆ.ಸಿ. ರೋಡ್ (ಶಾಖೆಯ ಆವರಣ) ದಲ್ಲಿ ಜರುಗಿತು.
ಈ ಶಿಬಿರವನ್ನು ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೆ.ಸಿ. ರೋಡ್, ಕೃಷ್ಣನಗರ, ತಲಪಾಡಿ ಇದರ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ರವರು ಉದ್ಘಾಟಿಸಿ ಮಾತನಾಡಿ “ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಿರುತ್ತಿರುವುದು ಶ್ಲಾಘನೀಯ” ಎಂದು ಶಿಬಿರಕ್ಕೆ ಶುಭ ಹಾರೈಸಿದರು.
ಕೆಎಂಸಿವಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ| ಉತ್ಕರ್ಷ್ ರವರು ಮಾತನಾಡಿ, “ಆರೋಗ್ಯದ ಸಮಸ್ಯೆ ಯಾವ ರೀತಿ ಬರುತ್ತದೆ, ಇದರ ಮುಂಜಾಗ್ರತೆಯನ್ನು ಯಾವ ರೀತಿ ಮಾಡಬಹುದು ಹಾಗೂ ಉಚಿತ ವೈದ್ಯಕೀಯ ಶಿಬಿರದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.
ಕೆ.ಸಿ ರೋಡ್‌ನ ಉಚ್ಚಿಲಸ್ ಕಾಂಪ್ಲೆಕ್ಸನ ಮಾಲಕರಾದ ಶ್ರೀ ಅಬ್ಬಾಸ್ ಉಚ್ಚಿಲ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಬ್ಯಾಂಕಿ0ಗ್ ವ್ಯವಹಾರದ ಜೊತೆಯಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಸತತವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಿ, ಜನ ಸಾಮಾನ್ಯರ ಆರೋಗ್ಯ ಬಗ್ಗೆ ಕಾಳಜಿ ವಹಿಸುತ್ತಿರುವುದು ಶ್ಲಾಘನೀಯ” ವೆಂದರು.
ಕೆಎಂಸಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶ್ರೀ ಹರ್ಬಟ್ ಪಿರೈರಾ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕೆ.ಎಂ.ಸಿ. ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ ಮಾಡುತ್ತಾ ಬರುತ್ತಿದೆ. ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುವುದು, ಬಿ.ಪಿ. ಮತ್ತು ಮದುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಉಚಿತ ಔಷಧಿ ವಿತರಣೆಯನ್ನು ನೀಡಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ 107ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ರೋಗ ಬರುವುದಕ್ಕಿಂತ ಮುಂಚಿತವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಇಂತಹ ಉಚಿತ ಆರೋಗ್ಯ ಶಿಬಿರಗಳಲ್ಲಿ ತಪಾಸಣೆ ಮಾಡಿಸುವುದರ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬಹುದು. ಈ ಶಿಬಿರವು ಕೆ.ಸಿ ರೋಡ್ ಪರಿಸರದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಕೆ.ಎಂ.ಸಿ. ಆಸ್ಪತ್ರೆ ಆಡಳಿತ ವರ್ಗ, ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ನತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಆನಂದ ಎಸ್ ಕೊಂಡಾಣ, ಶ್ರೀ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೆ.ಸಿ ರೋಡ್, ಕೃಷ್ಣ ನಗರ-ತಲಪಾಡಿ ಇದರ ಗೌರವಾಧ್ಯಕ್ಷರಾದ ಶ್ರೀ ಜಗನ್ನಾಥ, ಕಾರ್ಯದರ್ಶಿ ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು.
ಈ ಶಿಬಿರವನ್ನು ಎನ್.ಜಿ. ವರ್ಲ್್ಡ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೆ.ಸಿ ರೋಡ್, ಕೃಷ್ಣ ನಗರ, ತಲಪಾಡಿ ಹಾಗೂ ಶ್ರೀ ಲಕ್ಷ್ಮೀ ಶಾಮಿಯಾನ, ಪನೀರ್-ಬಾಳಿಕೆ, ಕೋಟೆಕಾರ್ ಇವರುಗಳ ಜಂಟಿ ಸಹಯೋಗದೊಂದಿಗೆ ಆಯೋಜನೆ ಮಾಡಲಾಗಿತ್ತು. ಈ ಶಿಬಿರದ ಪ್ರಯೋಜನವನ್ನು ಸುಮಾರು 150ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಪಡೆದುಕೊಂಡರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರ್‌ವೆಲ್ ಶಾಖೆಯ ಹಿರಿಯ ಶಾಖಾಧಿಕಾರಿ ಶ್ರೀಮತಿ ಸೌಮ್ಯಲತಾ ರವರು ಸ್ವಾಗತಿಸಿ, ಕೆ.ಸಿ ರೋಡ್ ಶಾಖೆಯ ಶಾಖಾಧಿಕಾರಿ ಶ್ರೀ ಶಿವರಾಮ್ ರವರು ವಂದಿಸಿದರು. ಸಂಘದ ಉಳ್ಳಾಲ ಶಾಖೆಯ ಹಿರಿಯ ಶಾಖಾಧಿಕಾರಿ ಶ್ರೀ ಸಚಿನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು