12:47 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಬೈಲುಕುಪ್ಪೆಯ ಬೌದ್ಧ ವಿಹಾರದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ: 100 ಎಕರೆ ಕಾಡಲ್ಲಿ 700 ಸ್ಥಳೀಯ ಮರಗಳ ಸಂರಕ್ಷಣೆ

27/04/2026, 20:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬೌದ್ಧಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕೊಡಗು ಜಿಲ್ಲೆ ಬೈಲುಕುಪ್ಪೆಯ ಬೌದ್ಧ ವಿಹಾರವನ್ನು ಸ್ಮರಿಸಿ, ಪ್ರಕೃತಿ ರಕ್ಷಣೆಗೆ ಅದು ನಡೆಸುತ್ತಿರುವ ಯತ್ನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಸಿಕ ಮನ್‌ ಕೀ ಬಾತ್‌ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೇನಲ್ಲಿ ನಾವು ಬುದ್ಧ ಪೂರ್ಣಿಮೆ ಆಚರಿಸುತ್ತೇವೆ. ಎಲ್ಲ ದೇಶವಾಸಿಗಳಿಗೆ ನಾನು ಅನಂತ ಶುಭಾಶಯ ಕೋರುತ್ತೇನೆ. ಭಗವಾನ್ ಗೌತಮ ಬುದ್ಧನ ಜೀವನ ಸಂದೇಶವು ಇಂದಿಗೂ ಪ್ರಸ್ತುತ’ ಎಂದು ಹೇಳಿದರು ಹಾಗೂ ಬೌದ್ಧ ಸಂಪ್ರದಾಯವು ಹೇಗೆ ಪ್ರಕೃತಿಯೊಂದಿಗೆ ಸಂಬಂಧ ಹೊಂದಿದೆ ಎಂಬುದನ್ನು ಬೈಲುಕುಪ್ಪೆಯ ಬೌದ್ಧ ವಿಹಾರದ ಉದಾಹರಣೆಯೊಂದಿಗೆ ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ‘ಮನ್‌ ಕೀ ಬಾತ್’ ಕಾರ್ಯಕ್ರಮದಲ್ಲಿ, ಕರ್ನಾಟಕದ ಬೈಲುಕುಪ್ಪೆ ಬೌದ್ಧವಿಹಾರದ ಪ್ರಕೃತಿ ಸಂರಕ್ಷಣಾ ಕಾರ್ಯವನ್ನು ಶ್ಲಾಘಿಸಿದ್ದಾರೆ. 100 ಎಕರೆ ಕಾಡಿನಲ್ಲಿ 700ಕ್ಕೂ ಹೆಚ್ಚು ಸ್ಥಳೀಯ ಮರಗಳನ್ನು ಸಂರಕ್ಷಿಸಿ, ಪ್ರಕೃತಿಯೊಂದಿಗಿನ ಬೌದ್ಧ ಸಂಪ್ರದಾಯದ ಸಂಬಂಧಕ್ಕೆ ಉತ್ತಮ ಉದಾಹರಣೆಯಾಗಿದೆ.
‘ಬೌದ್ಧ ಸಂಪ್ರದಾಯವು ನಮಗೆ ಪ್ರಕೃತಿಯೊಂದಿಗೆ ಸಂಪರ್ಕ ಹೊಂದುವುದನ್ನು ಕಲಿಸುತ್ತದೆ. ಭಗವಾನ್ ಬುದ್ಧನಿಗೆ ಒಂದು ಮರದ ಕೆಳಗೆ ಜ್ಞಾನೋದಯವಾಯಿತು. ಪ್ರಕೃತಿ ನಮ್ಮ ಜೀವನದ ಅವಿಭಾಜ್ಯ ಅಂಗ. ದೇಶಾದ್ಯಂತ ಇಂತಹ ಯತ್ನ ನಡೆಯುತ್ತಲೇ ಇವೆ. ಕರ್ನಾಟಕದಲ್ಲಿರುವ ಕರ್ಮ ವಿಹಾರವು ಒಂದು ಉತ್ತಮ ಉದಾಹರಣೆ. ಈ ವಿಹಾರವು 100 ಎಕರೆ ವಿಸ್ತಾರವಾದ ರೋಮಾಂಚಕ ಅರಣ್ಯ. ಈ ಕಾಡಿನಲ್ಲಿ 700 ಕ್ಕೂ ಹೆಚ್ಚು ಸ್ಥಳೀಯ ಮರಗಳನ್ನು ಸಂರಕ್ಷಿಸಲಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು