4:54 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮೆದುಳಿನಲ್ಲಿ ತೀವ್ರ ರಕ್ತಸ್ರಾವ: ಹಾಸನದಲ್ಲಿ 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

28/04/2026, 21:12

ಹಾಸನ(reporterkarnataka.com):ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

25 ವರ್ಷದ ಯುವತಿ ಶ್ವೇತಾ ಮೃತಪಟ್ಟ ಸಾಫ್ಟ್‌ವೇರ್ ಇಂಜಿನಿಯರ್, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ ಏಪ್ರಿಲ್ 25ರಂದು ಸಂಜೆ ಮನೆಯಲ್ಲಿದ್ದಾಗ ಹಠಾತ್ತಾಗಿ ಕುಸಿದು ಬಿದ್ದಿದ್ದರು. ತಕ್ಷಣ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದು ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಚಿಕಿತ್ಸೆ ಮಾಡುತ್ತಿರುವಾಗಲೇ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಶ್ವೇತಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ತುಂಬು ವಯಸ್ಸಿನ ಮಗಳ ಹಠಾತ್ ಸಾವಿನಿಂದ ಗಂಗಾಧರ್ ಕುಟುಂಬ ಕಂಗಾಲಾಗಿದ್ದು, ಹಸನ್ಮುಖಿ ಯುವತಿಯ ಸಾವಿಗೆ ಮ್ಯಾಗ್ನಾ ಸಾಫ್ಟ್ ಕಂಪನಿಯ ಸಹೋದ್ಯೋಗಿಗಳು ಮತ್ತು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು