12:28 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್ ಸವಾಲು

28/04/2026, 22:29

ಗಣೇಶ್ ಇನಾಂದಾರ್ ಬಳ್ಳಾರಿ

info.reporterkarnataka@gmail.com

ಬಿಜೆಪಿ ನೇತೃತ್ವದ ಕೇಂದ್ರದ ಎನ್ ಡಿ ಎ ಸರ್ಕಾರ ದೇಶದಲ್ಲಿ ಮಹಿಳಾ ಮೀಸಲಾತಿ ಕುರಿತು ಸುಳ್ಳು ಆರೋಪ ಮಾಡುವ ಬದಲು ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲು ಮುಂದಾಗಲಿ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸವಾಲು ಎಸೆದಿದ್ದಾರೆ.
ಭಾನುವಾರ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬಿಜೆಪಿ ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರಗಳ ಡಿ ಲಿಮಿಟೇಷನ್ ಲಿಂಕ್ ಯಾಕೆ ಮಾಡುತ್ತದೆ ತಮ್ಮ ಪಕ್ಷದಿಂದ ನೇರವಾಗಿ ಮಹಿಳೆಯರಿಗೆ ಶೇ 30ರಷ್ಟು ಮೀಸಲಾತಿ ನೀಡಲಿ ಎಂದು ತಿಳಿಸಿದರು.
ಪ್ರಧಾನಿ ಮೋದಿಯವರು ಮತ್ತು ಅವರ ಸಚಿವ ಸಂಪುಟದ ಸದಸ್ಯರು ಚುನಾವಣೆಯ ಹುಚ್ಚಿನಲ್ಲಿ ಇದ್ದಾರೆ. ದೇಶದಲ್ಲಿ ಮಹಿಳಾ ಮೀಸಲಾತಿ ತರುವ ಕುರಿತು 2014, 19 ಮತ್ತು 24ರಲ್ಲಿ ಬಿಜೆಪಿಯವರೇ ಮಾತಾಡಿದ್ದಾರೆ ಎಂದ ಅವರು ಪ್ರಧಾನಿ ಅವರು ತಮಿಳುನಾಡಿನಲ್ಲಿ ಚುನಾವಣೆ ಪ್ರಚಾರದಲ್ಲಿ ಕಪ್ಪು ಬಟ್ಟೆ ಧರಿಸಿದರೆ ಬೇರೆ ರಾಜ್ಯಕ್ಕೆ ಹೋದಾಗ ಮತ್ತೊಂದು ರೀತಿಯಲ್ಲಿ ಬಣ್ಣ ಬದಲಿಸುತ್ತಿದ್ದಾರೆ ಇದು ಏಕೆ ಎಂದು ಪ್ರಶ್ನಿಸಿದರು.
ಅಮೇರಿಕಾ ಅಧ್ಯಕ್ಷ ಟ್ರಂಪ್ ಭಾರತ ಒಂದು ನರಕ
ಎಂದ ಹೇಳಿಕೆಗೆ ತಾವೇ ದೇಶಾಭಿಮಾನಿಗಳು, ರಾಷ್ಟ್ರಭಕ್ತರು ಎಂಬಂತೆ ಬಿಂಬಿಸುವ ಬಿಜೆಪಿಯ ಎಲ್ಲ ಸದಸ್ಯರು ಮೌನವಾಗಿರುವುದು ಆಶ್ಚರ್ಯ ತಂದಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು