2:12 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ

29/04/2026, 18:09

ರಾಯಚೂರು(reporterkarnataka.com): ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿ ಮನೆಗೆ ಮರಳುವ ವೇಳೆ ವ್ಯಕ್ತಿಯೊಬ್ಬರು ದಾರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಹುಸೇನಪ್ಪ ಮಡಿವಾಳ್ (45) ಮೃತ ವ್ಯಕ್ತಿ. ಬಿಸಿಲಿನ ತಾಪಮಾನಕ್ಕೆ ದಣಿದು, ವಿಶ್ರಾಂತಿ ಸಿಗದೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯಾಪಲದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಹುಸೇನಪ್ಪ ಕೆಲಸ ಮುಗಿಸಿ ಮಧ್ಯಾಹ್ನ ಮನೆಗೆ ಬರುವಾಗ ದಾರಿಯಲ್ಲಿ ಕುಸಿದು ಬಿದ್ದಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತೆಗೆ ಸಾಗಿಸುವ ಮಾರ್ಗ ಮಧ್ಯೆ ಹುಸೇನಪ್ಪ ಮೃತಪಟ್ಟಿದ್ದಾರೆ. ಬಿಸಿಲಿನ ತಾಪಕ್ಕೆ ಲೋ ಬಿಪಿಯಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು