4:05 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ

30/04/2026, 21:27

ಧಾರವಾಡ(reporterkarnataka.com): ಧಾರವಾಡ ನಗರದ ಹೊರವಲಯದಲ್ಲಿ ಟಿಬೆಟಿಯನ್​ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಧಾರವಾಡ ಹೊರವಲಯದ ಹಳಿಯಾಳ ರಸ್ತೆಯಲ್ಲಿ ತಾಶಿ ಧೋಂಡು (39) ಎಂಬ ಬೌದ್ಧ ಸನ್ಯಾಸಿ ಕೊಲೆಯಾಗಿದೆ. ರಸ್ತೆ ಪಕ್ಕ ಬಿದ್ದಿದ್ದ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮೊದಲು ಅಪಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದರು, ಬಳಿಕ ಶವ ತಪಾಸಣೆ ನಡೆಸಿದ ಪೊಲೀಸರು ಕೊಲೆ ಎಂದು ಮಾಹಿತಿ ಸಿಕ್ಕಿದೆ.

*ಕೊಲೆಗೆ ಕಾರಣವೇನು?:*
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ತಾಶಿ ಧೋಂಡು (39) ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕಳೆದ ರಾತ್ರಿ ಕಿಡಿಗೇಡಿಗಳು ಬೇರೆ ಕಡೆ ಕೊಲೆ ಮಾಡಿ ಧಾರವಾಡದ ಹೊರವಲಯದಲ್ಲಿರುವ ಹಳಿಯಾಳ ರಸ್ತೆಯಲ್ಲಿ ಶವವನ್ನು ಎಸೆದು ಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಇನ್ನು, ರಸ್ತೆ ಪಕ್ಕ ಬಿದ್ದಿದ್ದ ಶವ ನೋಡಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು, ಮೊದಲು ರಸ್ತೆ ಅಪಘಾತದಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿದ್ದರು. ಆದ್ರೆ, ಆದರೆ ಶವವನ್ನು ಆಸ್ಪತ್ರೆಗೆ ರವಾನಿಸಿ ತಪಾಸಣೆ ನಡೆಸಿದ ಬಳಿಕ ಕೊಲೆಯಾಗಿರೋದನ್ನು ದೃಢಪಡಿಸಿದ್ದಾರೆ.
ಸದ್ಯ, ಈ ಘಟನೆ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು