6:11 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಣಿ ಶಾಖೆಯ ತೃತೀಯ ವಾರ್ಷಿಕೋತ್ಸವ: ಗ್ರಾಹಕರ ಸಭೆ

01/05/2026, 17:40

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಣಿ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಮಾಣಿ ಶಾಖೆಯಲ್ಲಿ ಜರುಗಿತು.
ಸಂಘದ ಗ್ರಾಹಕರುಗಳಾದ ಶ್ರೀ ಕಮಲಾಕ್ಷ, ಶ್ರೀ ಪುಷ್ಪ ರಾಜ್ ಕೆ., ಶ್ರೀ ಶಿವಣ್ಣ ಎಸ್. ಎಸ್., ಶ್ರೀ ಪ್ರಕಾಶ್, ಶ್ರೀ ಪ್ರದೀಪ್, ಶ್ರೀ ಅಬ್ದುಲ್ ರಝಕ ಮತ್ತು ಅಬ್ದುಲ್ ರಿಯಾಜ್ ಎನ್ ಅವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ, “ಸಂಘದ ಮಾಣಿ ಶಾಖೆಯಲ್ಲಿ ಗ್ರಾಹಕರ ಸಹಕಾರದಿಂದ ಉತ್ತಮ ರೀತಿಯಲ್ಲಿ ನಿರಖು ಠೇವಣಿ ಹಾಗೂ ಆಭರಣ ಸಾಲವನ್ನು ನೀಡಲಾಗಿದೆ. ಶಾಖೆಯು ಉತ್ತಮ ಲಾಭದಾಯಕವಾಗಿ ಕಾರ್ಯಾಚರಿಸುತ್ತಿದೆ ಎಂದು ತಿಳಿಸಿದರು.
ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ಎಲ್ಲಾ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ. ಎಲ್ಲಾ ಗ್ರಾಹಕರು ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು.
ಸದಸ್ಯರಾದ ಶ್ರೀ ಪುಷ್ಪ ರಾಜ್ ಕೆ ರವರು ಮಾತನಾಡಿ, ಸಂಘದ ಸಿಬ್ಬಂದಿಗಳ ಸೇವೆಯೂ ಉತ್ತಮವಾದದ್ದು ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಸದಸ್ಯರಾದ ಶ್ರೀ ಅಬ್ದುಲ್ ರಿಯಾಜ್ ಎನ್. ಅವರು , ಸಂಘವು ಶೀಘ್ರಗತಿಯಲ್ಲಿ ಚಿನ್ನಾಭರಣ ಸಾಲವನ್ನು ನೀಡುತ್ತಿದ್ದು, ಇದರಿಂದ ಗ್ರಾಹಕರಿಗೆ ತುಂಬಾ ಅನುಕೂಲವಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿನ್ನಾಭರಣ ಸಾಲದ ಸೇವೆಯನ್ನು ಹೆಚ್ಚಾಗಿ ನೀಡುತಿದ್ದು, ಈಗಾಗಲೇ ಸುಮಾರು 200 ಕೋಟಿ ಹೆಚ್ಚಿನ ಚಿನ್ನಾಭರಣ ಸಾಲವನ್ನು ನೀಡಲಾಗಿದ್ದು, ಗ್ರಾಹಕರ ಸಹಕಾರದಿಂದ ಮಾತ್ರ ಇದು ಸಾಧ್ಯ ಎಂಬುವುದಾಗಿ ತಿಳಿಸಿದರು. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ಜೀವ ವಿಮೆ, ಆರೋಗ್ಯ ವಿಮೆ ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುವುದಾಗಿ ತಿಳಿಸಿದರು. ಆಯ್ದ ರಜಾ ದಿನಗಳಲ್ಲಿ ನಮ್ಮ ಸೇವೆಯು ನಿರಂತರವಾಗರುತ್ತದೆ. ಮುಂದಿನ ದಿನಗಳಲ್ಲಿ ಆರೋಗ್ಯ ಶಿಬಿರ ನಡೆಸುವುದಾಗಿ ತಿಳಿಸಿದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ದೀಪ್ತಿ ಡಿ.ಎನ್. ರವರು ಸ್ವಾಗತಿಸಿ, ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಚಿತ್ರಾವತಿ ಎಚ್ ರವರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು