12:36 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ: ಮೇ 29ರಿಂದ ಶಾಲಾ-ಕಾಲೇಜುಗಳು ಆರಂಭ

02/05/2026, 12:29

ಬೆಂಗಳೂರು(reporterkarnataka.com): ರಜೆಯ ಮಜಾದಲ್ಲಿರುವ ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ವರ್ಷದ ಆರಂಭದ ನಿರೀಕ್ಷೆಯಲ್ಲಿದ್ದ ಪೋಷಕರಿಗೆ ಶಿಕ್ಷಣ ಇಲಾಖೆಯು ಮುಖ್ಯ ಮಾಹಿತಿಯೊಂದನ್ನು ನೀಡಿದೆ. ರಾಜ್ಯದ 2026-27ನೇ ಸಾಲಿನ ಶೈಕ್ಷಣಿಕ ಸಾಲಿನ ಅಧಿಕೃತ ಕ್ಯಾಲೆಂಡರ್ ಬಿಡುಗಡೆಯಾಗಿದ್ದು, ಮೇ 29ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ. ಪ್ರಮುಖ ದಿನಾಂಕಗಳು ಮತ್ತು

*ರಜೆಯ ವಿವರ:*
ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಈ ಬಾರಿಯ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಹೀಗಿದೆ:
*ಬೇಸಿಗೆ ರಜೆ ಅಂತ್ಯ: ಮೇ 28, 2026.

*ಶಾಲಾ ಪುನರಾರಂಭ: ಮೇ 29, 2026 (ಶುಕ್ರವಾರ).

*ಮೊದಲ ಶೈಕ್ಷಣಿಕ ಅವಧಿ: ಮೇ 29 ರಿಂದ ಅಕ್ಟೋಬರ್ 2 ರವರೆಗೆ.

*ದಸರಾ ರಜೆ: ಅಕ್ಟೋಬರ್ 3 ರಿಂದ ಅಕ್ಟೋಬರ್ 20 ರವರೆಗೆ (ಒಟ್ಟು 18 ದಿನಗಳು).

*ಎರಡನೇ ಶೈಕ್ಷಣಿಕ ಅವಧಿ: ಅಕ್ಟೋಬರ್ 21 ರಿಂದ 2027ರ ಏಪ್ರಿಲ್ ವರೆಗೆ.

*ಬೋಧನೆಗೆ ಹೆಚ್ಚಿನ ಆದ್ಯತೆ:”
ಈ ವರ್ಷ ಒಟ್ಟು 245 ದಿನಗಳನ್ನು ಶಾಲಾ ಕೆಲಸದ ದಿನಗಳೆಂದು ಗುರುತಿಸಲಾಗಿದೆ. ಅದರಲ್ಲಿ:
181 ದಿನಗಳು: ಕೇವಲ ಬೋಧನೆ ಮತ್ತು ಕಲಿಕಾ ಪ್ರಕ್ರಿಯೆಗಾಗಿ ಮೀಸಲು.

*ಉಳಿದ ದಿನಗಳು:* ಪರೀಕ್ಷೆಗಳು, ಕ್ರೀಡೆ, ಪ್ರವಾಸ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿಗದಿಪಡಿಸಲಾಗಿದೆ.

*ದಾಖಲಾತಿ ಅವಧಿ:* ಜೂನ್ 30 ರೊಳಗೆ ಎಲ್ಲಾ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಶಾಲೆಗಳಿಗೆ ಸೂಚಿಸಲಾಗಿದೆ.

*’ಶಾಲೆಗೆ ಮರಳಿ’ ವಿಶೇಷ ಅಭಿಯಾನ:*
ಶಿಕ್ಷಣದಿಂದ ವಂಚಿತರಾದ ಮಕ್ಕಳನ್ನು ಗುರುತಿಸಲು ಇಲಾಖೆ ಈ ಬಾರಿ ವಿಶೇಷ ಗಮನ ಹರಿಸಿದೆ. 6 ರಿಂದ 18 ವರ್ಷದೊಳಗಿನ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಿ, ಅವರನ್ನು ಮುಖ್ಯವಾಹಿನಿಗೆ ತರಲು ಗ್ರಾಮ ಮತ್ತು ಜಿಲ್ಲಾ ಮಟ್ಟದಲ್ಲಿ ವಿಶೇಷ ಅಭಿಯಾನ ನಡೆಯಲಿದೆ.

*ಪೋಷಕರಿಗೆ ಸೂಚನೆ:*
ಸರ್ಕಾರವು ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮೇ 29ರಿಂದ ಪೂರ್ಣ ಪ್ರಮಾಣದಲ್ಲಿ ತರಗತಿಗಳು ಆರಂಭವಾಗಲಿವೆ. ಹೀಗಾಗಿ, ಪೋಷಕರು ತಮ್ಮ ಮಕ್ಕಳಿಗೆ ಅಗತ್ಯವಿರುವ ಪಠ್ಯಪುಸ್ತಕಗಳು, ಸಮವಸ್ತ್ರ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು