3:11 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ ಗೆಲುವು

02/05/2026, 20:06

ಚಿಕ್ಕಮಗಳೂರು(reporterkarnataka.com):ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ ಎಣಿಕೆಯಲ್ಲಿ ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಆ ಮೂಲಕ ಎದುರಾಗಿದ್ದ ದೊಡ್ಡ ಅಗ್ನಿಪರೀಕ್ಷೆಯಲ್ಲೂ ಜಯಗಳಿಸಿದ್ದಾರೆ. ಸದ್ಯ ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗದಲ್ಲಿ ಸಂಭ್ರಮಾಚರಣೆ ಜೋರಾಗಿದ್ದು, ಶಾಸಕ ಟಿ.ಡಿ.ರಾಜೇಗೌಡ ಪರ ಕಾರ್ಯಕರ್ತರು ಘೋಷಣೆ ಕೂಗಿ, ಹೂವಿನ ಮಳೆ ಸುರಿಸಿದು ಹರ್ಷ ವ್ಯಕ್ತಪಡಿಸಿದರು.
ಹೈಕೋರ್ಟ್ ಆದೇಶದ ಮೇರೆಗೆ ಇಂದು ಚಿಕ್ಕಮಗಳೂರು ನಗರದ IDSG ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆ ಮಾಡಲಾಗಿದೆ. ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮರು ಎಣಿಕೆ ಫೈಟ್ ಜೋರಾಗಿತ್ತು. ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.

*ಶಾಸಕ ಟಿ.ಡಿ.ರಾಜೇಗೌಡ ಗೆದ್ದಿದ್ದಾರೆ ಎಂದು ಅಭಿಮಾನಿಗಳ ಸಂಭ್ರಮ:*
ಇನ್ನು ಅತ್ತ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೆಸ್​ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ಸಂಭ್ರಮಿಸಿದರು. 267 ಮತಗಳು ಬಹುತೇಕ ತಿರಸ್ಕೃತ ಬೆನ್ನಲ್ಲೇ ರಾಜೇಗೌಡ ಗೆದ್ದರು ಎಂದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.

*ಗೆಲುವಿನ ಬಗ್ಗೆ ಕಾಂಗ್ರೆಸ್ ‌ಶಾಸಕ ರಾಜೇಗೌಡ ಹೇಳಿದ್ದಿಷ್ಟು:*
ಇನ್ನು ಈ ಬಗ್ಗೆ ಕಾಂಗ್ರೆಸ್ ‌ಶಾಸಕ ರಾಜೇಗೌಡ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ ನನಗೆ ಗೆಲುವಾಗಿದೆ. ನನ್ನ ಕಾರ್ಯಕರ್ತರು ಸಂಭ್ರಮ ಪಡುವಂತಾಗಿದೆ. ನನ್ನ ವಿರುದ್ಧ ನಿರಂತರವಾಗಿ ಆರೋಪ ಮಾಡುತ್ತಿದ್ದರು. ಆದರೆ ಸತ್ಯಕ್ಕೆ ಜಯವಾಗಿದೆ ಎಂದರು.
ಈ ಹಿಂದೆ ಮತ‌ಎಣಿಕೆ ವೇಳೆ ಪ್ರತಿಯೊಂದು ಮತಗಳನ್ನ ಪರಿಶೀಲನೆ ಮಾಡಿದ್ದರೂ ಆರೋಪ ಮಾಡಿದ್ದರು. ಕೆಲವು ಟ್ರಂಕ್ ಗಳು ಓಪನ್ ಆಗಿತ್ತು, ಅದಕ್ಕೆ ನಾನು ಟ್ಯಾಂಪರಿಂಗ್ ಮಾಡಿರಬಹುದು ಎಂದು ಆರೋಪ ಮಾಡಿದ್ದೆ. ಬಿಜೆಪಿ ಅಭ್ಯರ್ಥಿ 40, 42 ಮತಗಳಿಂದ ಗೆಲುವು ನಮ್ಮದೆ ಅಂದ್ರು. ಹಾಗಾಗಿ ನನಗೆ ಅನುಮಾನ ಬಂದಿತ್ತು. 12 ಅಂಚೆ ಮತಗಳು ನಾಪತ್ತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

*ಹಿನ್ನೆಲೆ:* 2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರವು ತೀವ್ರ ಕುತೂಹಲ ಮೂಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು, ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೇವಲ 201 ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. ಈ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು 1822 ಅಂಚೆ ಮತಗಳ ಪೈಕಿ 279 ಮತಗಳನ್ನು ತಿರಸ್ಕೃತಗೊಳಿಸಲಾಗಿತ್ತು. ಈ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೀವರಾಜ್ ಅವರು ಮರು ಎಣಿಕೆಗೆ ಮನವಿ ಮಾಡಿದ್ದರು, ಆದರೆ ಅಂದಿನ ಜಿಲ್ಲಾ ಚುನಾವಣಾಧಿಕಾರಿಗಳು ಆ ಮನವಿಯನ್ನು ಪರಿಗಣಿಸದೆ ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು. ಅದರಂತೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರು ಎಣಿಕೆಯಲ್ಲೂ ಟಿ.ಡಿ. ರಾಜೇಗೌಡ ಅವರೇ ಜಯಭೇರಿ ಬಾರಿಸುವ ಮೂಲಕ ತಮ್ಮ ಗೆಲುವನ್ನು ಮರುಸ್ಥಾಪಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು