11:34 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

04/05/2026, 19:02

ಕೋಲ್ಕತ್ತಾ (reporterkarnataka.com): ಪಶ್ಚಿಮ ಬಂಗಾಳದ ಅಸನ್ಸೋಲ್ ಇಂಜಿನಿಯರಿಂಗ್ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಇಂದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎಣಿಕೆ ಕೇಂದ್ರದ ಹೊರಗಡೆ ನೆರೆದಿದ್ದ ಗುಂಪುಗಳ ನಡುವೆ ದಿಢೀರ್ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಹತೋಟಿಗೆ ತರಲು ಭದ್ರತಾ ಸಿಬ್ಬಂದಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಕೇಂದ್ರದ ಹೊರಭಾಗದಲ್ಲಿ ಜಮಾಯಿಸಿದ್ದ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಅದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು.



ಜನಸಮೂಹವನ್ನು ಚದುರಿಸಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಅಲ್ಲಿದ್ದ ಭದ್ರತಾ ಪಡೆಗಳು ಲಾಠಿ ಬೀಸಬೇಕಾಯಿತು. ಸದ್ಯ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ ಎಣಿಕೆ ಕೇಂದ್ರದ ಸುತ್ತಮುತ್ತ ಬಿಗಿ ಭದ್ರತೆಯನ್ನು ಮುಂದುವರಿಸಲಾಗಿದ್ದು, ಅನಗತ್ಯವಾಗಿ ಗುಂಪು ಸೇರದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು