9:56 PM Monday4 - May 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,…

ಇತ್ತೀಚಿನ ಸುದ್ದಿ

ಉಪ ಚುನಾವಣೆ ಫಲಿತಾಂಶ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ: ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಇಬ್ರಾಹಿಂ ನವಾಝ್

04/05/2026, 21:46

ಮಂಗಳೂರು(reporterkarnataka.com): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯ ಉಪ ಚುನಾವಣೆಯ ಗೆಲುವು ಕೇವಲ ಎರಡು ಕ್ಷೇತ್ರಗಳ ಜಯವಲ್ಲ, ಇದು 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ಸೂಚನೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಇಬ್ರಾಹಿಂ ನವಾಝ್ ಬಣ್ಣಿಸಿದ್ದಾರೆ.
ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ರಾಜ್ಯ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿರುವ ಆಶೀರ್ವಾದ. ಈ ಫಲಿತಾಂಶವು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಜನತೆ ನೀಡಿದ ತಕ್ಕ ಉತ್ತರ ಎಂದು ಅವರು ಹೇಳಿದ್ದಾರೆ.
ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ರಾಜ್ಯದ ಪ್ರತೀ ಹಳ್ಳಿಹಳ್ಳಿಗಳಲ್ಲಿ ಕಾಂಗ್ರೆಸ್‌ ಸರ್ಕಾರದ ಜನಪರ ಆಡಳಿತ, ರಾಜ್ಯದ ಅಭಿವೃದ್ಧಿಗಳನ್ನು ಮುಂದಿಟ್ಟು ಆಮೂಲಕ ಪಕ್ಷವನ್ನು ಬಲಪಡಿಸಲು ವಿಶೇಷ ಅಭಿಯಾನ ಕೈಗೊಳ್ಳಲಿದೆ. ಯುವಕರಲ್ಲಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಎಂದ ಅವರು, 2028ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಾಂಗ್ರೆಸ್ ಭರ್ಜರಿ ಸಾಧನೆ ಮಾಡುವಂತೆ ಮಾಡುವುದು ನಮ್ಮ ಯುವ ತಂಡದ ಗುರಿ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಇಬ್ರಾಹಿಂ ನವಾಝ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು