6:18 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೇರಳ: 3 ಕ್ಷೇತ್ರಗಳಲ್ಲಿ ಅರಳಿದ ಕಮಲ; ರಾಜೀವ್ ಚಂದ್ರಶೇಖರ್ ನೇಮಮ್ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಜಯ

04/05/2026, 21:53

ತಿರುವನಂತಪುರಂ(reporterkarnataka.com): ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಗಮನಾರ್ಹ ಸಾಧನೆ ಮಾಡಿದೆ. ಕೇರಳದ ಮೂರು ಕ್ಷೇತ್ರಗಳಲ್ಲಿ ಕಮಲ ಅರಳಿದೆ.
ನೇಮಮ್ ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್, ಕಳಕೂಟ್ಟಂ ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್ ಮತ್ತು ಚಾಥನೂರ್ ಕ್ಷೇತ್ರದಲ್ಲಿ ವಿ. ಮುರಳೀಧರನ್ ಗೆಲುವು ಸಾಧಿಸಿದ್ದಾರೆ.
ನೇಮಮ್ ಕ್ಷೇತ್ರದಲ್ಲಿ ತಮ್ಮ ನಿಕಟ ಸ್ಪರ್ಧಿ ವಿ.ಶಿವನ್‌ಕುಟ್ಟಿ ವಿರುದ್ಧ ಚಂದ್ರಶೇಖರ್ 3,500ಕ್ಕೂ ಅಧಿಕ ಮತಗಳ ಗೆಲುವು ಸಾಧಿಸಿದ್ದಾರೆ.
ಕಳಕೂಟ್ಟಂ ಕ್ಷೇತ್ರದಲ್ಲಿ ನಿಕಟ ಸ್ಪರ್ಧೆ ಏರ್ಪಟ್ಟಿತ್ತು. ಕೊನೆಯ ಸುತ್ತಿನ ವರೆಗೂ ಸಾಗಿದ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕಡಕಂಪಳ್ಳಿ ಸುರೇಂದ್ರನ್ ವಿರುದ್ದ ಮುರಳೀಧರನ್ ಅಲ್ಪ ಮತಗಳ ಅಂತರದ ಜಯ (428 ಮತ) ಸಾಧಿಸಿದ್ದಾರೆ.
ಇನ್ನು ಚಾಥನೂರ್ ಕ್ಷೇತ್ರದಲ್ಲಿ ಗೋಪಕುಮಾರ್, ಎಲ್‌ಡಿಎಫ್‌ನ ಆರ್. ರಾಜೇಂದ್ರನ್ ಅವರನ್ನು 4,398 ಮತಗಳ ಅಂತರದಿಂದ ಸೋಲಿಸಿದ್ದಾರೆ.
2016ರಲ್ಲಿ ನೇಮಮ್ ಕ್ಷೇತ್ರದಿಂದಲೇ ಎನ್‌ಡಿಎದ ಒ.ರಾಜಗೋಪಾಲ್ ಐತಿಹಾಸಿಕ ಗೆಲುವು ದಾಖಲಿಸಿದ್ದರು. ಆದರೆ 2021ರಲ್ಲಿ ಯಾವುದೇ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಈಗ ನೇಮಮ್ ಕ್ಷೇತ್ರವನ್ನು ಮರಳಿ ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು