10:01 PM Monday4 - May 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು

04/05/2026, 22:00

ತಿರುವನಂತಪುರಂ(reporterkarnataka.com): ಇನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಕೇವಲ 35 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದ್ದು, 10 ವರ್ಷದ ಆಡಳಿತಕ್ಕೆ ಮತದಾರ ಬ್ರೇಕ್ ಹಾಕಿದ್ದಾರೆ.

*ಯಾರಾಗ್ತಾರೆ ಸಿಎಂ?*
ಇತ್ತ ಕಾಂಗ್ರೆಸ್- ಯುಡಿಎಫ್ ಮೈತ್ರಿಯು ಸರ್ಕಾರ ರಚಿಸುವುದು ಬಹುತೇಕ ಖಚಿವಾಗಿದ್ದು, ಈಗ ರಾಜ್ಯದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಮಿಲಿಯನ್ ಡಾಲರ್ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಕಳೆದು ಹತ್ತು ವರ್ಷದಿಂದ ಪಿಣರಾಯಿ ಆಡಳಿತವನ್ನು ನೋಡಿ-ನೋಡಿ ಸಾಕಾಗಿರುವ ಪಕ್ಷದ ಹಿರಿಯ ನಾಯಕರು ಈ ಭಾರಿ ಸಿಎಂ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಸುವ ಸಾಧ್ಯತೆಯಿದೆ.
ರೇಸ್‌ನಲ್ಲಿರುವವರು ಇವರೇ ನೋಡಿ!

*ರಮೇಶ್ ಚೆನ್ನಿತ್ತಲ:*
ಹಿರಿಯ ನಾಯಕ ಪಿ.ಜೆ. ಕುರಿಯನ್ ಅವರು ರಮೇಶ್ ಚೆನ್ನಿತ್ತಲ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಬಹಿರಂಗವಾಗಿ ಘೋಷಿಸುವ ಮೂಲಕ ಚರ್ಚೆಗೆ ನಾಂದಿ ಹಾಡಿದರು. ಚೆನ್ನಿತ್ತಲ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಮಲ್ಲಿಕಾರ್ಜುನ ಖರ್ಗೆ ಮತ್ತು ಗಾಂಧಿ ಕುಟುಂಬದೊಂದಿಗೆ ಸಮಾಲೋಚನೆ ನಡೆಸಿದ್ದು ಕುತೂಹಲ ಮೂಡಿಸಿದೆ. ಆದಾಗ್ಯೂ, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಚೆನ್ನಿತ್ತಲ ಸ್ಪಷ್ಟಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾಗಿ ಸತೀಶನ್ ಕಾರ್ಯವೈಖರಿಯೇ ಯುಡಿಎಫ್ ಗೆಲುವಿಗೆ ಕಾರಣವಾಗಿದೆ ಎನ್ನುವುದು ಪಕ್ಷದ ಕಾರ್ಯಕರ್ತರ ಮಾತಾಗಿದೆ. ಎರ್ನಾಕುಲಂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಶಿಯಾಸ್ ಸತೀಶನ್ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ನಡೆಸಿದ ಅಭಿಯಾನವು ಹಿರಿಯ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

*ಕೆ.ಸಿ. ವೇಣುಗೋಪಾಲ್:*
ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ. ಸುಧಾಕರನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲಿಸಿರುವುದು ಕಣವನ್ನು ಮತ್ತಷ್ಟು ರಂಗೇರಿಸಿದೆ. ವೇಣುಗೋಪಾಲ್ ನಾಯಕತ್ವವನ್ನು ಉಮ್ಮನ್ ಚಾಂಡಿ ಮತ್ತು ಎ.ಕೆ. ಆಂಟನಿಯಂತಹ ದೈತ್ಯ ನಾಯಕರಿಗೆ ಹೋಲಿಸಲಾಗುತ್ತಿದೆ. ಆದರೆ ಈ ಭಾರಿ ವಿಧಾನಸಭಾ ಚುನಾವಣೆಗೆ ವೇಣುಗೋಪಾಲ್ ಸ್ಪರ್ಧಿಸಿರದ ಕಾರಣ ಇವರ ಆಯ್ಕೆ ಬಹುತೇಕ ಕಠಿಣವೆಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು