7:42 AM Sunday18 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್‌ ದಂಧೆ: 14 ಕೋಟಿ ಮೌಲ್ಯದ ಮಾದಕ ವಸ್ತು ವಶ: 6 ಮಂದಿ ಬಂಧನ

05/05/2026, 20:20

ಬೆಂಗಳೂರು(reporterkarnataka.com): ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಜಾಲದ ವಿರುದ್ಧ ಸಮರ ಸಾರಿರುವ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಈ ಜಾಲದಲ್ಲಿ ತೊಡಗಿದ್ದ ಕೇರಳ ಮೂಲದ ಪೆಡ್ಲರ್‌ಗಳು ಸೇರಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಂದಿನಿ ಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಸೌಗೇಶ್ ಮತ್ತು ಅಲ್ತಾಫ್ ಎಂಬ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 5 ಕೋಟಿ 75 ಲಕ್ಷ ರೂಪಾಯಿ ಮೌಲ್ಯದ 5 ಕೆಜಿ 700 ಗ್ರಾಂ ತೂಕದ ಅತ್ಯಂತ ದುಬಾರಿ ‘ಹೈಡ್ರೋ ಗಾಂಜಾ’ವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಈ ಮಾದಕ ವಸ್ತುವನ್ನು ವಿದೇಶದಿಂದ ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಇವರ ಮೇಲೆ ಈಗಾಗಲೇ ಅಲ್ಲಿನ ವಿವಿಧ ಠಾಣೆಗಳಲ್ಲಿ ಎನ್‌ಡಿಪಿಎಸ್ (NDPS) ಪ್ರಕರಣಗಳು ದಾಖಲಾಗಿವೆ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.

*ಯಶವಂತಪುರದಲ್ಲಿ 9 ಕೋಟಿ ಮೌಲ್ಯದ ಎಂಡಿಎಂಎ ಸಹಿತ ರೌಡಿಶೀಟರ್ ಲಾಕ್:*
ಮತ್ತೊಂದೆಡೆ, ಯಶವಂತಪುರ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಸೈಯದ್ ಸುಹೇಲ್, ಮಹಮ್ಮದ್ ಸಮೀರ್, ಸಾಧಿಕ್ ಪಾಷಾ ಮತ್ತು ಮಹಮ್ಮದ್ ಹಜ್ರುಲ್ಲ ಹಕ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 9 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಎಂಡಿಎಂಎ (MDMA) ಕ್ರಿಸ್ಟಲ್‌ಗಳನ್ನು ಸೀಜ್ ಮಾಡಲಾಗಿದೆ. ಈ ಪೈಕಿ ಸೈಯದ್ ಸುಹೇಲ್ ಹೊಸಕೋಟೆಯ ಕುಖ್ಯಾತ ರೌಡಿಶೀಟರ್ ಆಗಿದ್ದು, ಈ ಹಿಂದೆ ನಡೆದಿದ್ದ ಪ್ರಕರಣವೊಂದರಲ್ಲಿ ಪೊಲೀಸರು ಈತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
ಇನ್ನು ಬಂಧಿತ ಆರೋಪಿಗಳು ನೈಜೀರಿಯಾ ಮೂಲದ ಪ್ರಜೆಗಳಿಂದ ಈ ಡ್ರಗ್ಸ್ ಖರೀದಿಸಿ ಬೆಂಗಳೂರಿನ ಸ್ಥಳೀಯ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕೃತ್ಯಕ್ಕೆ ಬಳಸಿದ್ದ ಒಂದು ಕಾರು ಮತ್ತು ಐದು ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸದ್ಯ ಡ್ರಗ್ ಸಪ್ಲೈ ಮಾಡಿದ್ದ ನೈಜೀರಿಯಾ ಪ್ರಜೆಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು