9:39 AM Tuesday27 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್…

ಇತ್ತೀಚಿನ ಸುದ್ದಿ

ಯಾದಗಿರಿ | ಪಿಎಸ್‌ಐ – ಮಹಿಳಾ ಕಾನ್ಸ್‌ಟೇಬಲ್ ಪ್ರೇಮ ಪ್ರಕರಣ; ಎಸ್‌ಪಿ ಕಚೇರಿ ತಲುಪಿದ ಖಾಕಿ ಕಿತ್ತಾಟ!

06/05/2026, 22:17

ಯಾದಗಿರಿ(reporterkarnataka.com): ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗುಪ್ತಚರ ವಿಭಾಗದ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿರುವ ವೀರೇಶ್ ಹಾಗೂ ರಾಯಚೂರಿನಲ್ಲಿ ಮಹಿಳಾ ಕಾನ್ಸ್‌ಟೇಬಲ್ ನಡುವಿನ ಎಂಟು ವರ್ಷಗಳ ಸುದೀರ್ಘ ಸಂಬಂಧ ಈಗ ರಂಪಾಟವಾಗಿದೆ.
2017ರಲ್ಲಿ ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಇವರ ನಡುವೆ ಪ್ರೇಮಾಂಕುರವಾಗಿತ್ತು. ನಂತರದ ದಿನಗಳಲ್ಲಿ ಇಬ್ಬರೂ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ವೀರೇಶ್ ಪಿಎಸ್‌ಐ ಆಗಿ ಮತ್ತು ಈಕೆ ಕಾನ್ಸ್‌ಟೇಬಲ್ ಆಗಿ ನೇಮಕಗೊಂಡ ಬಳಿಕವೂ ಇವರ ಸಂಬಂಧ ಮುಂದುವರಿದಿತ್ತು.
ಇಬ್ಬರೂ ಸುಮಾರು ನಾಲ್ಕು ವರ್ಷಗಳ ಕಾಲ ರಾಯಚೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ದಂಪತಿಗಳಂತೆ ವಾಸವಿದ್ದರು. ಅಷ್ಟೇ ಅಲ್ಲದೆ, ಒಂದು ದೇವಸ್ಥಾನದಲ್ಲಿ ಸರಳವಾಗಿ ಹಾರ ಬದಲಾಯಿಸಿಕೊಳ್ಳುವ ಮೂಲಕ ಸಾಂಪ್ರದಾಯಿಕವಾಗಿಯೂ ಒಂದಾಗಿದ್ದರು. ಆದರೆ, ಈಗ ಮಹಿಳೆ ಅವರು ಜಾತಿಯ ನೆಪವೊಡ್ಡಿ ಈ ಸಂಬಂಧವನ್ನು ನಿರಾಕರಿಸುತ್ತಿದ್ದಾರೆ ಎಂಬುದು ವೀರೇಶ್ ಅವರ ವಾದ.
ಈ ಇಡೀ ಪ್ರಕರಣದಲ್ಲಿ ಆರ್ಥಿಕ ಮತ್ತು ನೈತಿಕ ವಂಚನೆಯ ಆರೋಪಗಳು ಕೇಳಿಬರುತ್ತಿವೆ. ಮಹಿಳೆ ಅವರು ತಮ್ಮಿಂದ ಹಂತ ಹಂತವಾಗಿ ಸುಮಾರು 35 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದಾರೆ ಎಂದು ವೀರೇಶ್ ದೂರಿದ್ದಾರೆ. ಅಲ್ಲದೆ, ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದಾಗ ಎರಡು ಬಾರಿ ಗರ್ಭಿಣಿಯಾಗಿದ್ದರೂ, ತನಗೆ ಮಾಹಿತಿ ನೀಡದೆಯೇ ಗರ್ಭಪಾತ ಮಾಡಿಸಿಕೊಂಡಿದ್ದಾರೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ಈ ಜೋಡಿಯ ಪ್ರೀತಿಯ ಪಯಣ ಈಗ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ತಲುಪಿದೆ. ಇಷ್ಟೆಲ್ಲಾ ವರ್ಷಗಳ ಕಾಲ ಜೊತೆಗಿದ್ದ ಮಹಿಳೆ ಈಗ ವೀರೇಶ್ ಅವರ ಕೈಬಿಟ್ಟು, ಮೇ 7ರಂದು ಮತ್ತೊಬ್ಬ ಯುವಕನೊಂದಿಗೆ ವಿವಾಹವಾಗಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ತನಗೆ ನ್ಯಾಯ ಸಿಗಬೇಕು ಮತ್ತು ಈ ಮದುವೆಯನ್ನು ತಡೆಯಬೇಕು ಎಂದು ಕೋರಿ ಪಿಎಸ್‌ಐ ವೀರೇಶ್ ರಾಯಚೂರು ಎಸ್‌ಪಿ ಅವರಿಗೆ ಆನ್‌ಲೈನ್ ಮೂಲಕ ದೂರು ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು