1:45 PM Monday23 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ದ.ಕ.ಜಿಲ್ಲೆಯಲ್ಲಿ ನಾಳೆ ಬೃಹತ್ ಲಸಿಕಾ ಮೇಳ: ಸದುಪಯೋಗಕ್ಕೆ ಜಿಲ್ಲಾಧಿಕಾರಿ ಮನವಿ

16/09/2021, 08:31

ಮಂಗಳೂರು (reporterkarnataka.com.): ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಇದೇ ಸೆಪ್ಟೆಂಬರ್ 17ರ ಶುಕ್ರವಾರದಂದು ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಬೃಹತ್ ಲಸಿಕಾಕರಣ ಅಭಿಯಾನವನ್ನು ಆಯೋಜಿಸಲಾಗಿದ್ದು, ಸುಮಾರು 533 ಕೇಂದ್ರಗಳಲ್ಲಿ ಲಸಿಕೆಯನ್ನು ನೀಡಲು ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ. ಹೇಳಿದರು.

ಅವರು ಕೋವಿಡ್ ಲಸಿಕಾ ಮೇಳವನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲು ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳವುದರ ಕುರಿತು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಿಡಿಓ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಗ್ರಾಮಲೆಕ್ಕಿಗರ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದರು. 

ನಗರ ಹಾಗೂ ಗ್ರಾಮೀಣ ಭಾಗದ ಪ್ರತಿ ಮನೆಗಳಿಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಲ್ ಕಲೆಕ್ಟರ್ ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಭೇಟಿ ನೀಡಿ ಇಲ್ಲಿಯವರೆಗೂ ಲಸಿಕೆ ಪಡೆಯದಿರುವ 18 ವರ್ಷ ಮೆಲ್ಪಟ್ಟವರನ್ನು ಗುರುತಿಸಿ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳುವಂತೆ ಸೂಚಿಸಿದರಲ್ಲದೇ, ಅವರಿಗೆ ಲಸಿಕೆ ಪಡೆಯಲು ಸ್ಥಳ ಹಾಗೂ ದಿನಾಂಕ ಇರುವ ಸ್ಲಿಪ್ (ಚೀಟಿ) ಯನ್ನು ವಿತರಿಸಿ ಲಸಿಕೆ ತೆಗೆದುಕೊಳ್ಳುವಂತೆ ತಿಳಿಸಬೇಕು ಎಂದರು.

ವಿಶೇಷಚೇತನರು ಮತ್ತು ಅಶಕ್ತರನ್ನು ಗುರುತಿಸಿ ಅವರು ಇರುವ ಸ್ಥಳಕ್ಕೆ ಹೋಗಿ ಲಸಿಕೆ ನೀಡಬಹುದು ಅಥವಾ ಅವರನ್ನು ವಾಹನದ ಮೂಲಕ ಲಸಿಕಾ ಕೇಂದ್ರಕ್ಕೆ ಕರೆತಂದು ಲಸಿಕೆ ನೀಡಬಹುದು ಎಂದರು.
ಲಸಿಕೆ ನೀಡಲು ಸರ್ಕಾರಿ ಶಾಲೆಗಳು, ಸಮುದಾಯ ಭವನ, ಅಂಗನವಾಡಿ ಕೇಂದ್ರಗಳು ಹಾಗೂ ಇತರೆ ಸರಕಾರಿ ಕಟ್ಟಡಗಳನ್ನು ಲಸಿಕಾ ಕೇಂದ್ರಗಳನ್ನಾಗಿ ಬಳಸಿಕೊಂಡು ಲಸಿಕೆ ನೀಡಬೇಕು ಎಂದರು.
ಬೃಹತ್ ವ್ಯಾಕ್ಸಿನ್ ಮೇಳವು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಮೆಗಾ ವ್ಯಾಕ್ಸಿನ್ ಮೇಳದಲ್ಲಿ 1,50,000 ಕೋವಿಡ್ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಜನಜಾಗೃತಿ ಮೂಡಿಸಬೇಕು. ಮಾಧ್ಯಮಗಳಲ್ಲಿ ಹಾಗೂ ಧ್ವನಿವರ್ಧಕದ ಮೂಲಕ ಲಸಿಕೆ ತೆಗೆದುಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.
ಲಸಿಕಾ ಕೇಂದ್ರಗಳಲ್ಲಿ ಹೆಚ್ಚಿನ ವೈದ್ಯಕೀಯ ಸಿಬ್ಬಂದಿಯ ಅವಶ್ಯಕತೆ ಇದ್ದಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರುಗಳೊಂದಿಗೆ ಚರ್ಚಿಸಿ ಅವರ ಸೇವೆಯನ್ನು ಪಡೆದುಕೊಳ್ಳಬಹುದು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್ ಮಾತನಾಡಿ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಸಭೆ ನಡೆಸಿ ಲಸಿಕೆ ಪಡೆಯದವರ ಬಗ್ಗೆ ಮಾಹಿತಿಯನ್ನು ಪಡೆದು ಲಸಿಕೆ ಹಾಕಿಸಿಕೊಳ್ಳುವಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಲ್ ಕಲೆಕ್ಟರ್ ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿ ಹೇಳಬೇಕೆಂದರು.

ಸ್ವಚ್ಚ ಭಾರತ್ ಮಿಷನ್ ಅಡಿಯಲ್ಲಿ ನೀಡಲಾಗಿರುವ ವಾಹನಗಳ ಮೂಲಕ ಧ್ವನಿವರ್ಧಕಗಳನ್ನು ಬಳಸಿಕೊಂಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲಸಿಕೆಯ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ನೀಡಬೇಕು. ಲಸಿಕೆ ಪಡೆಯಲು ಅಶಕ್ತರಿರುವವರಿಗೆ ಮೊಬೈಲ್ ವಾಹನಗಳನ್ನು ಬಳಸಿಕೊಂಡು ಮನೆ ಮನೆಗೆ ಲಸಿಕೆ ಎನ್ನುವ ಘೋಷಣೆ ಮೂಲಕ ಲಸಿಕೆಗಳನ್ನು ನೀಡಬೇಕು ಎಂದರು.
ಬೃಹತ್ ಲಸಿಕಾ ಮೇಳದಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಗೆ-40,000, ಮೂಡಬಿದ್ರೆ-10,000, ಮುಲ್ಕಿ-10,000, ಉಳ್ಳಾಲ-20,000, ಬಂಟ್ವಾಳ-20,000, ಬೆಳ್ತಂಗಡಿ-20,000, ಪುತ್ತೂರು-20,000 ಹಾಗೂ ಸುಳ್ಯ-10,000 ಲಸಿಕೆ ನೀಡುವ ಗುರಿಯನ್ನು ನಿಗಧಿಪಡಿಸಲಾಗಿದೆ, ಸುಮಾರು 553 ಲಸಿಕಾ ಕೇಂದ್ರಗಳಲ್ಲಿ ಲಸಿಕೆಯನ್ನು ನೀಡಲಾಗುವುದು ಎಂದರು.

ಎಲ್ಲಾ ಗಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಿಡಿಒ, ಗ್ರಾಮ ಸಹಾಯಕರು ಹಾಗೂ ಇತರ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು