8:32 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ ಮಗು

08/05/2026, 20:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೆಳಗೂರು ಎಸ್ಟೇಟ್‌ನಲ್ಲಿ ಮಧ್ಯಪ್ರದೇಶದ ಭೋಪಾಲ್ ಮೂಲದ ಗೋನು ಮತ್ತು ಸೋನಾ ದಂಪತಿಗಳ 1.5 ವರ್ಷದ ಮಗು ಶಿವಂ ಕಾಣೆಯಾಗಿದ್ದ ಘಟನೆ ಆತಂಕ ಸೃಷ್ಟಿಸಿತ್ತು.
ಮೂರು ದಿನಗಳ ಹಿಂದೆ ಕೆಲಸದ ನಿಮಿತ್ತ ಕೆಳಗೂರು ಎಸ್ಟೇಟ್‌ಗೆ ಬಂದಿದ್ದ ದಂಪತಿಗಳ ಪುತ್ರ ಶಿವಂ ಮೇ 6ರಂದು ಸಂಜೆ 5 ಗಂಟೆ ಸುಮಾರಿಗೆ ಮನೆಯ ಬಳಿ ಆಟವಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದ. ಈ ಕುರಿತು ಪೋಷಕರು ಬಾಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಬಾಳೂರು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ, ಮೂಡಿಗೆರೆ ಪೊಲೀಸ್ ವೃತ್ತ ನಿರೀಕ್ಷಕ ರಾಜಶೇಖರ್ ನೇತೃತ್ವದಲ್ಲಿ ವಿಶೇಷ ಶೋಧ ಕಾರ್ಯಾಚರಣೆ ಆರಂಭಿಸಿದರು.
ಸುಮಾರು 12 ಗಂಟೆಗಳ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಕಾಣೆಯಾಗಿದ್ದ ಬಾಲಕ ಶಿವಂನನ್ನು ಪೊಲೀಸರು ಸುರಕ್ಷಿತವಾಗಿ ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದರು.
ಪೊಲೀಸರ ತ್ವರಿತ ಕಾರ್ಯಾಚರಣೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು