4:14 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ನಂಜನಗೂಡು: ಕೆಂಪಿ ಸಿದ್ದನ ಹುಂಡಿಯಲ್ಲಿ ಮೇಕೆ ಕೊಂದ ಚಿರತೆ; ಗ್ರಾಮಸ್ಥರಲ್ಲಿ ಆತಂಕ

08/05/2026, 20:38

ಮೋಹನ್ ನಂಜನಗೂಡು

info.reporterkarnataka@gmail.com

ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲಿ ಹಾಡಹಗಲೇ ಚಿರತೆಯೊಂದು ಮೇಕೆ ಮೇಲೆರಗಿ ಕೊಂದು ಹಾಕಿರುವ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ.
ಗ್ರಾಮದ ಹೊರವಲಯದ ತಾಂಡ್ಯ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಜಮೀನಿನಲ್ಲಿ ರೈತ ನಾಗಣ್ಣ ಎಂಬುವವರು ಗುರುವಾರ ಮಧ್ಯಾಹ್ನ ತಮ್ಮ ಮೇಕೆಗಳನ್ನು ಮೇಯಿಸುತ್ತಿರುವ ಸಂದರ್ಭ ಪಕ್ಕದ ಪೊದೆಯಲ್ಲಿ ಹೊಂಚು ಹಾಕಿ ಕುಳಿತಿದ್ದ ಚಿರತೆ ಏಕಾಏಕಿ ಮೇಕೆಯ ಮೇಲರಗಿ ಅದರ ಕತ್ತನ್ನು ಕಚ್ಚಿ
ಎಳೆದುಕೊಂಡು ಹೋಗುವಾಗ ಅಲ್ಲೇ ಇದ್ದ ದನಗಾಹಿಗಳು ತೀವ್ರ ಕೂಗಾಟ ನಡೆಸಿ ಕಲ್ಲು ಮತ್ತು ಕುಡುಗಲು ಜೆಲ್ಲೆ ಯಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ.


ಇದರಿಂದ ಗಾಬರಿಗೊಂಡ ಚಿರತೆಯು ಮೇಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದೆ ಅಷ್ಟರಲ್ಲಿಯೇ ತೀವ್ರವಾಗಿ ಗಾಯಗೊಂಡ ಮೇಕೆಯ ಪ್ರಾಣಿ ಪಕ್ಷಿ ಹಾರಿಹೋಗಿದೆ.
ಮೇಕೆಯು ಗರ್ಭ ಧರಿಸಿದ್ದು ಇನ್ನೇನು ಮರಿ ಹಾಕುವ ಕಾಲಘಟ್ಟದಲ್ಲಿದ್ದು ಸುಮಾರು 15ರಿಂದ 20 ಸಾವಿರ ರೂಪಾಯಿ ಬೆಲೆ ಬಾಳುತ್ತಿತ್ತು ಎಂದು ರೈತರು ತಿಳಿಸಿದ್ದಾರೆ.
ಚಿರತೆಯ ದಾಳಿಯನ್ನು ಕಣ್ಣಾರೆ ಕಂಡ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿ ಮುಂದೇನಪ್ಪ ಗತಿ ಎಂದು ಪರಿತಪಿಸುವಂತಾಗಿದೆ.
ಇದೇ ಸ್ಥಳದಲ್ಲಿ ಆಗಿಂದಾಗ್ಗೆ ಇಂತಹ ಘಟನೆಗಳು ನಡೆಯುತ್ತಲೇ ಇವೆ ಆದರೂ ಸಂಬಂಧ ಪಟ್ಟ ಅರಣ್ಯ ಇಲಾಖೆಯವರು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ಸಂಗೋಪನೆ ವೈದ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಕೆಯ ಮರಣೋತ್ತರ ಪರೀಕ್ಷೆ ನಡೆಸಿದರು
ಘಟನೆಯ ಬಗ್ಗೆ ದನದಾಹಿಗಳು ಹಾಗೂ ಗ್ರಾಮದ ಮುಖಂಡ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜಯ್ಯ ಮಾತನಾಡಿ ಇದನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬದವರಿಗೆ ಈ ರೀತಿ ಆದರೆ ಅವರ ಜೀವನದ ಗತಿ ಏನು ಅಲ್ಲದೆ ಮನುಷ್ಯನ ಮೇಲೆರಗಿ ಮನುಷ್ಯನ ಜೀವಕ್ಕೆ ಹಾನಿಯಾಗಿದ್ದರೆ ಯಾರು ಹೊಣೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಮುಂದೆ ಈ ರೀತಿ ಮರುಕಳಿಸದoತೆ ಅರಣ್ಯ ಇಲಾಖೆಯವರು ಇಲ್ಲಿ ಬೋನು ಇರಿಸಿ ಚಿರತೆಯನ್ನು ಹಿಡಿಯಬೇಕು. ಹಿಂದೆಯೂ ಕೂಡ ಈ ಪ್ರದೇಶದಲ್ಲಿ ಚಿರತೆ ಸಾಕಷ್ಟು ಕುರಿ ಮೇಕೆ ಮತ್ತು ಜಾನುವಾರುಗಳನ್ನು ಕೊಂದು ಹಾಕಿದೆ.ಇದನ್ನು ಸೇರಿ ಹಿಂದೆ ದನ ಮತ್ತು ಕುರಿಗಳನ್ನು ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು