11:03 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ ಚೋರರು!

09/05/2026, 18:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಡು ಮುಗೀತು…ಈಗ ಕಾಡಲ್ಲೂ ಸ್ಟಾರ್ಟ್ ಆಯ್ತು ಕಳ್ಳರ ಕಾಟ. ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಡೀಮ್ಡ್ ಫಾರೆಸ್ಟ್‌ನಲ್ಲಿ ಹುಲಿಗಳ ಚಲನವಲನ ಹಾಗೂ ಗಣತಿಗೆ ಅಳವಡಿಸಿದ ಸುಮಾರು 40 ಸಾವಿರ ಮೌಲ್ಯದ ಕ್ಯಾಮೆರಾ ಕಳ್ಳತನ ಮಾಡಲಾಗಿದೆ.
ಮುತ್ತೋಡಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆಗೆ ಕಳ್ಳರು ಈ ಮೂಲಕ ಶಾಕ್ ನೀಡಿದ್ದಾರೆ.
ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕ್ಯಾಮರಾಕ್ಕೆ ಕಳ್ಳರು ಕೈಹಾಕಿ ಕೈಚಳಕ ತೋರಿಸಿದ್ದಾರೆ. ಅಭಯಾರಣ್ಯಕ್ಕೆ ಎಂಟ್ರಿಯಾಗಲು ಅನುಮತಿ ಕಡ್ಡಾಯ ಜಾಗದಲ್ಲಿದ್ದ ಕ್ಯಾಮರಾ ಅಳವಡಿಸಲಾಗಿತ್ತು. ಮುತ್ತೋಡಿ ಅರಣ್ಯ ವಲಯದಲ್ಲಿ ಹುಲಿ ಗಣತಿಗಾಗಿ ಕ್ಯಾಮೆರಾ ಹಾಕಲಾಗಿತ್ತು. ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮೆರಾಗಳನ್ನೇ ಟ್ರ್ಯಾಪ್‌ ಮಾಡಲಾಗಿದೆ.
ಹುಲಿ ಗಣತಿ ಕಾರ್ಯಾಚರಣೆಗೆ ಅಳವಡಿಸಿದ್ದ 2 ಕ್ಯಾಮೆರಾಗಳು ಕೂಡ ನಾಪತ್ತೆಯಾಗಿದೆ.


ಮೇ 4ರವರೆಗೆ ಕಾರ್ಯನಿರ್ವಹಿಸುತ್ತಿದ್ದ ಕ್ಯಾಮೆರಾಗಳು ಮೇ 5 ರಿಂದ ನಾಪತ್ತೆಯಾಗಿದೆ. ಉಪವಲಯ ಅರಣ್ಯಾಧಿಕಾರಿ ಯಾಸೀನ್ ಬಾಷಾ ದೂರು ನೀಡಿದ್ದಾರೆ. ಅರಣ್ಯ ಪಾಲಕ ನಂದೀಶ್ ಜೊತೆ ಗಸ್ತಿನ ವೇಳೆ ಕಳ್ಳತನ ಬೆಳಕಿಗೆ ಬಂದಿದೆ.
ಕಳುವಾದ ಎರಡು ಕ್ಯಾಮೆರಾಗಳ ಒಟ್ಟು ಮೌಲ್ಯ ₹40 ಸಾವಿರ ಎಂದು ಅಂದಾಜಿಸಲಾಗಿದೆ.
ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಯಾಮರಾ ಕಳ್ಳತನ ಅರಣ್ಯ ಪ್ರದೇಶದಲ್ಲಿನ ಭದ್ರತೆ ಬಗ್ಗೆ ಪ್ರಶ್ನೆ ಮೂಡಿಸಿದೆ. ಕ್ಯಾಮೆರಾ ಕಳ್ಳತನ ಬೆನ್ನಲ್ಲೇ ಕಾಡು ಪ್ರಾಣಿಗಳ ಸುರಕ್ಷತೆಯ ಬಗ್ಗೆ ಸಂಶಯ ಎದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು