10:56 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಮಂಗಳೂರು: ಮೇ 17, 18ರಂದು ರಾಜ್ಯಮಟ್ಟದ ಗೇರು ಮೇಳ, ಕಾರ್ಯಾಗಾರ

09/05/2026, 21:17

ಮಂಗಳೂರು(reporterkarnataka.com): ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಮೇ 17 ಮತ್ತು 18ರಂದು ನಗರದ ಕದ್ರಿ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಗೇರು ಮೇಳ ಹಾಗೂ ಕಾರ್ಯಾಗಾರ ನಡೆಯಲಿದೆ.
ನಗರದ ಸರ್ಕಿಟ್‌ಹೌಸ್‌ನಲ್ಲಿ ಇಂದು ಮೇಳದ ಪೋಸ್ಟರ್ ಬಿಡುಗಡೆ ಮಾಡಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಈ ವಿಷಯ ತಿಳಿಸಿದರು.
ಕರಾವಳಿ ಜನರೊಂದಿಗೆ ಗೇರು ಕೃಷಿಯು ಬೆರೆತುಕೊಂಡಿದ್ದು, ಅವಿನಾಭಾವ ಸಂಬಂಧವನ್ನು ಹೊಂದಿದೆ. ನಮ್ಮ ಹಿರಿಯರು ಬೀಡಿ ಕಟ್ಟುವುದು, ಗೇರು ಕಾರ್ಖಾನೆಯಲ್ಲಿ ಕೆಲಸ, ಹೆಂಚು ಕೈಗಾರಿಕೆಯಲ್ಲಿ ಕೆಲಸ ಹಾಗೂ ಮೀನು ಕೃಷಿಯನ್ನು ಮಾಡಿ ಬದುಕು ಕಟ್ಟಿಕೊಳ್ಳುವುದರ ಜತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದ್ದಾರೆ ಎಂದರು.
ಗೇರು ಗಿಡ ಬಡವರ ಪಾಲಿನ ಕಲ್ಪವೃಕ್ಷ’, ಹಸಿರು ಗೇರು ರೈತರ ಬದುಕು ಬಂಗಾರ’ ಎಂಬ ಘೋಷಣೆಯೊಂದಿಗೆ ಮೇಳ ನಡೆಯಲಿದ್ದು, ಗೇರು ಕೃಷಿಯ ಅಭಿವೃದ್ಧಿಯೊಂದಿಗೆ ಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ನುಡಿದರು.

ಗೇರು ಬೀಜಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆ ಇದ್ದು, ಇಲ್ಲಿನ ಇಳುವರಿ ಸಾಲದ ಕಾರಣ ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಆದುದರಿಂದ ಪ್ರತಿಯೊಂದು ಮನೆಯಲ್ಲಿಯೂ ಗೇರು ಗಿಡವನ್ನು ಬೆಳೆಸುವ ಮೂಲ ಅದರ ಪ್ರಾಮುಖ್ಯತೆಯನ್ನು ತಿಳಿಸಬೇಕು ಎಂದು ಹೇಳಿದರು.
ಮೇಳದಲ್ಲಿ 1,000 ಗೇರು ಗಿಡಗಳನ್ನು ಉಚಿತವಾಗಿ ವಿತರಿಸುವುದರೊಂದಿಗೆ, 10 ಜನ ಸಾಧಕ ಕೃಷಿಕರಿಗೆ ಸನ್ಮಾನ, ಬೇರೆ ಬೇರೆ ತಳಿಯ ಬಗ್ಗೆ ಪರಿಚಯ, ಗೇರು ಬೀಜ ಮಾತ್ರವಲ್ಲ ಹಣ್ಣಿನಿಂದ ಕೂಡ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
ಮೇಳದಲ್ಲಿ 5-6 ಗೋಷ್ಠಿಗಳನ್ನು ಹಮ್ಮಿಕೊಂಡಿದ್ದು, ತಜ್ಷರು ಹಾಗೂ ಸಾಧಕ ಕೃಷಿಕರಿಂದ ಗೋಷ್ಠಿಗಳು ನಡೆಯಲಿವೆ. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಗೇರು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಮಲಾ, ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಲನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು