7:13 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ ದರ ಏರಿಕೆ ಸಾಧ್ಯತೆ

12/05/2026, 21:53

ಬೆಂಗಳೂರು(reporterkarnataka.com): ಪ್ರಧಾನಿ ಮೋದಿ ಅವರು ಕೆಲವು ಸಲಹೆ ಮತ್ತು ತ್ಯಾಗಗಳಿಗೆ ಕರೆ ನೀಡಿದ್ದರು. ಅವುಗಳಲ್ಲಿ ಜನ ಅಡುಗೆ ಎಣ್ಣೆಯ ಬಳಕೆಯನ್ನು ಮಿತಿಗೊಳಿಸುವ ಮನವಿ ಸಹ ಒಂದಾಗಿದೆ. ಈ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಲ್ಲಿ ಅಡುಗೆ ಎಣ್ಣೆ ಬೆಲೆ ಕುಸಿತವಾಗಿದ್ದರೇ, ಅಕ್ಕಿ ದರ ಗಗನಕ್ಕೇರಿದೆ.
ಹೌದು ಕಳೆದ ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೇಶದ ಆರ್ಥಿಕತೆಯ ಒಳಿತಿನ ದೃಷ್ಟಿಯಿಂದ ಕೆಲ ಮನವಿಗಳನ್ನು ಮಾಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಗೃಹಿಣಿಯರಿಗೆ ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿ ಅನ್ನೋದು ಸಹ ಒಂದಾಗಿದೆ.
ಅಡುಗೆ ಎಣ್ಣೆ ಬಳಕೆ ಮಿತಿಗೆ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಲ್ಲಿ ಅಡುಗೆ ಎಣ್ಣೆ ಬೆಲೆ ಕಡಿಮೆಯಾಗಿದೆ. ಎಲ್ಲಾ ಬ್ರ್ಯಾಂಡ್‌ನ ಅಡುಗೆ ಎಣ್ಣೆಗಳಲ್ಲೂ ಒಂದು ಲೀಟರ್‌ಗೆ ಮೂರು ರೂಪಾಯಿಯಿಂದ ಐದು ರೂಪಾಯಿವರೆಗೂ ಕಡಿಮೆಯಾಗಿದೆ. ಒಂದು ಟಿನ್ ಅಡುಗೆ ಎಣ್ಣೆಯಲ್ಲಿ 30-40 ರೂಪಾಯಿವರೆಗೂ ಇಳಿಕೆಯಾಗಿದೆ. ಅಡುಗೆ ಎಣ್ಣೆಯ ಆಮದು ಪ್ರಮಾಣ ಸುಧಾರಣೆ, ಪೂರೈಕೆ ಹೆಚ್ಚಳ ಹಾಗೂ ಮೋದಿ ಕರೆಯೂ ಈ ದರ ಇಳಿಕೆಗೆ ಕಾರಣ ಎಂದು ವ್ಯಾಪಾರಿಗಳು ಹೇಳಿದ್ದಾರೆ.
ಎಣ್ಣೆಯ ವಿಧ ಹಳೆಯ ದರ (ರೂ.)ಹೊಸ ದರ (ರೂ.) ವ್ಯತ್ಯಾಸ (ರೂ.)
ಪಾಮ್ ಆಯಿಲ್ 143 141 2 ರೂ. ಇಳಿಕೆ
ಸನ್ ಪ್ಯೂರ್ 170 167 3 ರೂ. ಇಳಿಕೆ
ಕಡಲೆಕಾಯಿ ಎಣ್ಣೆ 190 185 5 ರೂ. ಇಳಿಕೆ

ಇತ್ತೀಚಿನ ಸುದ್ದಿ

ಜಾಹೀರಾತು