8:07 PM Friday2 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ನೀಟ್ ಪರೀಕ್ಷೆ ರದ್ದು | 22.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಆಟ: ಸುಹಾನ್ ಆಳ್ವ ಆಕ್ರೋಶ

12/05/2026, 21:56

ಮಂಗಳೂರು(reporterkarnataka.com): ಮೇ 3ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯುಐ ಅಧ್ಯಕ್ಷ ಸುಹಾನ್ ಆಳ್ವ ತೀವ್ರವಾಗಿ ಖಂಡಿಸಿದ್ದಾರೆ.
ಈ ವರ್ಷ ಸುಮಾರು 22.5 ಲಕ್ಷ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸು ಹೊತ್ತು ಈ ಪರೀಕ್ಷೆಯನ್ನು ಬರೆದಿದ್ದರು. ಆದರೆ, ಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪದೋಷಗಳಿಂದಾಗಿ ಇಡೀ ಪರೀಕ್ಷಾ ವ್ಯವಸ್ಥೆಯೇ ಕುಸಿದುಬಿದ್ದಿದೆ. ಕೇಂದ್ರ ಸರ್ಕಾರದ ಈ ವೈಫಲ್ಯವು ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ ಎಂದು ಸುಹಾನ್ ಆಳ್ವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಪದೇ ಪದೇ ಇಂತಹ ಹಗರಣಗಳು ನಡೆಯುತ್ತಿರುವುದು ಕೇಂದ್ರ ಸರ್ಕಾರದ ಅದಕ್ಷತೆಯನ್ನು ತೋರಿಸುತ್ತದೆ. ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಒಂದೆಡೆ ವಿದ್ಯಾರ್ಥಿಗಳು ಹಗಲಿರುಳು ಕಷ್ಟಪಟ್ಟು ಓದುತ್ತಿದ್ದರೆ, ಮತ್ತೊಂದೆಡೆ ವ್ಯವಸ್ಥಿತವಾಗಿ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡುವ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಹಗರಣದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಇಲ್ಲದಿದ್ದರೆ ಜಿಲ್ಲಾದ್ಯಂತ  ಬೀದಿಗೆ ಇಳಿದು ಪ್ರತಿಭಟನೆ ನಡೆಸಲಿದ್ದೇವೆ.

*ಒಂದು ಪತ್ರಿಕೆ ಸೋರಿಕೆ ತಡೆಯಲಾಗದವರು ಸರ್ಕಾರ ನಡೆಸಲು ಲಾಯಕ್ಕೇ?:*
ವಿದ್ಯಾರ್ಥಿಗಳ ಕನಸಿನ ಮೇಲೆ ಗದಾಪ್ರಹಾರ ಮಾಡಿರುವ ಕೇಂದ್ರ ಸರ್ಕಾರಕ್ಕೆ ಮುಂಬರುವ ದಿನಗಳಲ್ಲಿ ಯುವಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು