4:32 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ಪ್ರಧಾನ ಕಚೇರಿಗೆ ಕೇರಳ ಶಿವಗಿರಿ ಮಠದ ಪದ್ಮಶ್ರೀ ಪುರಸ್ಕೃತ ಶ್ರೀ ವಿಶುದ್ಧಾನಂದ ಸ್ವಾಮೀಜಿ ಭೇಟಿ

13/05/2026, 20:33

ಮಂಗಳೂರು(reporterkarnataka.com): ಕೇರಳದ ಶಿವಗಿರಿಯ ಶ್ರೀ ನಾರಾಯಣ ಗುರು ಧರ್ಮ ಸಂಘ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀ ವಿಶುದ್ಧಾನಂದ ಸ್ವಾಮೀಜಿ ಅವರು ಕೇರಳದ ಅಲಪುö್ಪಝ ಜಿಲ್ಲೆಯ ಕಾಯಂಕುಳಂ ಮಠದ (ಶಿವಗಿರಿ ಮಠದ ಶಾಖೆ) ತಮ್ಮ 48ಕ್ಕೂ ಮಿಕ್ಕಿ ಅನುಯಾಯಿಗಳೊಂದಿಗೆ ನಗರದ ಪಡೀಲ್ ನಲ್ಲಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಸಂಘದ ವತಿಯಿಂದ ಪದ್ಮಶ್ರೀ ಪರಮಪೂಜ್ಯ ಶ್ರೀ ವಿಶುದ್ಧಾನಂದ ಸ್ವಾಮೀಜಿ ಅವರನ್ನು ಪೂಜ್ಯ ಭಾವದಿ ಯೋಗ್ಯ ಬಗೆಯಲ್ಲಿ ಸತ್ಕರಿಸಿ, ಗೌರವಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ, ಹಿರಿಯ ಶಾಖಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಪ್ರಶಾಂತ್, ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ ಮಂಗಳೂರು ಇದರ ವ್ಯವಸ್ಥಾಪಕ ಟ್ರಸ್ಟಿಯಾದ ಶ್ರೀ ರಾಮಚಂದ್ರ ಪೂಜಾರಿ ದೇರೆಬೈಲ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು