5:21 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ

ಇತ್ತೀಚಿನ ಸುದ್ದಿ

ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು

16/09/2021, 18:59

ಹೆಬ್ರಿ(reporterkarnataka.com) :
ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ.

ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ  ಲಾರಿಗೆ ಡಿಕ್ಕಿಯಾಗಿ ಹಿಂದಿನಿಂದ ಬರುತ್ತಿದ್ದ ಲಾರಿಯಡಿ‌ ಬಿದ್ದು ಈ ದುರ್ಘಟನೆ ನಡೆದಿದೆ.

ಜಿನದತ್ತ ಜೈನ್ ಅವರು ಕಾರ್ಕಳ ಅಗುಂಬೆ ಮಾರ್ಗವಾಗಿ ಸಾಗರದತ್ತ ಹೋಗುವ ಸಂದರ್ಭದಲ್ಲಿ ಓವರ್ ಟೇಕ್ ಭರದಲ್ಲಿ ಈ ಘಟನೆ ನಡೆದಿದೆ. ವರಂಗ ಕೆಲ್ ಟೆಕ್ ರಸ್ತೆ ತಿರುವಿನಲ್ಲಿಯೇ ಈ ಘಟನೆ ನಡೆದಿದೆ. ಇದು ಅಪಘಾತ ವಲಯವಾಗಿದ್ದು,

ಅನೇಕ ಅಪಘಾತಗಳು ಸಂಭವಿಸುತ್ತಿವೆ.ರಸ್ತೆಯಲ್ಲಿ ಸೂಚನ ಫಲಕ ಅಳವಡಿಸಬೇಕೆಂದು ಜನರು ಪಟ್ಟು ಹಿಡಿದಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು