5:47 PM Wednesday1 - July 2026
ಬ್ರೇಕಿಂಗ್ ನ್ಯೂಸ್
ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ…

ಇತ್ತೀಚಿನ ಸುದ್ದಿ

ಕಕ್ಯಪದವು: ಮಹಾವಿಷ್ಣು ದೇವಸ್ಥಾನದ ಗರ್ಭಗುಡಿಗೆ ಸಿಡಿಲು ಬಡಿದು ಹಾನಿ

17/05/2026, 09:00

ಬಂಟ್ವಾಳ(reporterkarnata.com): ಬಂಟ್ವಾಳ ತಾಲೂಕಿನ ಕಕ್ಯಪದವು ಸಮೀಪದ ಇಳಿಯೂರು ಎಂಬಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೇ ಸುಮಾರು ರೂ 3.50 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದಿದ್ದ ಮಹಾವಿಷ್ಣು ದೇವಳದ ಗರ್ಭಗುಡಿಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿದೆ.


ಶನಿವಾರ ಸಂಜೆ ಭಾರೀ ಸಿಡಿಲು ಮಿಂಚು ಸಹಿತ ಗಾಳಿ ಮಳೆಗೆ ಶಿಲಾಮಯ ಗರ್ಭಗುಡಿ ಮೇಲಿನ ಅಂತಸ್ತು ಒಡೆದಿದೆ. ಸಿಡಿಲಿನ ಅಬ್ಬರಕ್ಕೆ ಶಿಲೆಯ ತುಂಡುಗಳು ಅಂಗಣಕ್ಕೆ ಬಿದ್ದಿದ್ದು, ಸುಮಾರು ರೂ.ಒಂದೂ ಕೋಟಿಗೂ ಮಿಕ್ಕಿ ನಷ್ಟ ಉಂಟಾಗಿದೆ. ಈ ಸಂದರ್ಭದಲ್ಲಿ ದೇವಳದ ಒಳಗೆ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ.ಕೊರೋನ ಸಂಕಷ್ಟದ ನಡುವೆ ನೂರಾರು ಮಂದಿ ಭಕ್ತರು ಶ್ರಮದಾನ ಸೇವೆ ಸಲ್ಲಿಸಿ ಕಟ್ಟಿದ ದೇವಾಲಯಕ್ಕೆ ಈ ಆಕಸ್ಮಿಕ ಹಾನಿ ಭಕ್ತರಲ್ಲಿ ಆತಂಕ ಮೂಡಿಸಿದೆ ಎಂದು ದೇವಳದ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು