6:50 PM Thursday21 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ ತೇರ್ಗಡೆ

21/05/2026, 18:50

ಬೆಂಗಳೂರು(reporterkarnataka.com): 2025-26ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ಪ್ರಕಟವಾಗಿದೆ. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ ಸೈಟ್​​ನಲ್ಲಿ ರಿಸಲ್ಟ್ ಪ್ರಕಟಿಸಿದೆ.
2026ರ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಗುರುವಾರ (ಮೇ 21) ಪ್ರಕಟಿಸಿದೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಸೇರಿದಂತೆ ಒಟ್ಟು 80,535 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು. ಈ ಪೈಕಿ 36,764 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

*ಫಲಿತಾಂಶದ ವಿವರ:*
ಪಿಯುಸಿ ಎರಡನೇ ಪರೀಕ್ಷೆ-2 ಪರೀಕ್ಷೆಗೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ ಒಟ್ಟು 80,535 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 36,764 ವಿದ್ಯಾರ್ಥಿಗಳು ತೇಗರ್ಡೆಯಾಗಿದ್ದಾರೆ. ಇನ್ನು ಪರೀಕ್ಷೆ ಬರೆದಿದ್ದ 43,311 ಬಾಲಕರಲ್ಲಿ 19367 ವಿದ್ಯಾರ್ಥಿಗಳು ಪಾಸಾಗಿದ್ದರೆ, 37,224 ಬಾಲಕಿಯರ ಪೈಕಿ 17,397 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.
ಉನ್ನತ ಶ್ರೇಣಿ: 85%ಕ್ಕಿಂತ ಹೆಚ್ಚು ಅಂಕ ಪಡೆದವರು 62 ವಿದ್ಯಾರ್ಥಿಗಳು,
ಪ್ರಥಮ ದರ್ಜೆ: 60%-85% ಅಂಕ‌ ಪಡೆದ ವಿದ್ಯಾರ್ಥಿಗಳು 8086
ದ್ವಿತೀಯ ದರ್ಜೆ : 50%-60% ಅಂಕ ಪಡೆದ ವಿದ್ಯಾರ್ಥಿಗಳು 16,940, ಇನ್ನು ಶೇಕಡಾ 50% ಕ್ಕಿಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು 11,676.
ಹೊಸಬರು : 80,535 ವಿದ್ಯಾರ್ಥಿಗಳ‌ ಪೈಕಿ 36,764 ವಿದ್ಯಾರ್ಥಿಗಳು ಉತ್ತೀರ್ಣ
ಪುನರಾವರ್ತಿತ : 34,419 ವಿದ್ಯಾರ್ಥಿಗಳ ಪೈಕಿ 10,279 ವಿದ್ಯಾರ್ಥಿಗಳು ಉತ್ತೀರ್ಣ
ಖಾಸಗಿ : 5456 ವಿದ್ಯಾರ್ಥಿಗಳ fಪೈಕಿ 1562 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು