11:26 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಸೆ.19ರಿಂದ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆ: ಯಾಕಾಗಿ ಈ ಸರ್ವೇ? ಇದರ ಪ್ರಯೋಜನವೇನು? ಮುಂದಕ್ಕೆ ಓದಿ ನೋಡಿ

17/09/2021, 09:03

ಮಂಗಳೂರು (reporterkarnataka.com):-ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ, ಕೇಂದ್ರ ಸರ್ಕಾರವು ಸರ್ವೋಚ್ಚ ನ್ಯಾಯಾಲಯದ ಬೀದಿ ಬದಿ ವ್ಯಾಪಾರಸ್ಥರ ನೀತಿಯನ್ನು ಅನುಷ್ಟಾನಗೊಳಿಸುವ ಸಲುವಾಗಿ ಬೀದಿ ವ್ಯಾಪಾರಸ್ಥರ  ಅಧಿನಿಯಮ 2014 ಮತ್ತು ರಾಜ್ಯ ಸರ್ಕಾರವು ಕರ್ನಾಟಕ ಬೀದಿ ಬದಿ ವ್ಯಾಪಾರಸ್ಥರ ನಿಯಮಗಳು 2020ನ್ನು ಜಾರಿಗೊಳಿಸಿದೆ.

ಈ ಸಂಬಂಧವಾಗಿ ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಬೀದಿ ವ್ಯಾಪಾರಸ್ಥರಿಗೆ ಬೆಂಬಲ ಘಟಕವನ್ನು ಅನುಷ್ಠಾನಗೊಳಿಸುತ್ತಿದೆ. ಈ ಘಟಕದಡಿಯಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯೊಳಗಡೆ ಬೀದಿ ವ್ಯಾಪಾರಸ್ಥರ ಸಮೀಕ್ಷೆ ನಡೆಸಿ ಗುರುತಿನ ಚೀಟಿ ಮತ್ತು ಬೀದಿ ಬದಿ ವ್ಯಾಪಾರದ ಪ್ರಮಾಣ ಪತ್ರವನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗಡೆ ಬೀದಿ ಬದಿಗಳಲ್ಲಿ ವ್ಯಾಪಾರಗಳಲ್ಲಿ ತೊಡಗಿಸಿಕೊಂಡಿರುವ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆಯನ್ನು ಇದೇ ಸೆಪ್ಟೆಂಬರ್ 19ರಿಂದ ಸೆಪ್ಟೆಂಬರ್ 30 ರವರೆಗೆ  ಕೈಗೊಳ್ಳಲಾಗುತ್ತಿದೆ. 
ಸಮೀಕ್ಷಾ ಸಮಯದಲ್ಲಿ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ತಮ್ಮಲ್ಲಿರುವ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಚಾಲನಾ ಪ್ರಮಾಣ ಪತ್ರ, ಬ್ಯಾಂಕ್ ಖಾತೆಯ ಪಾಸ್ ಪುಸ್ತಕ ಮತ್ತು ಬೀದಿ ಬದಿ ವ್ಯಾಪಾರಸ್ಥರ ಸಂಘ/ಒಕ್ಕೂಟದಲ್ಲಿ ನೋಂದಣಿಯಾಗಿರುವ ದಾಖಲೆಗಳು, ಕೋವಿಡ್ 19 ಲಸಿಕೆ ಪಡೆದುಕೊಂಡಿರುವ ದಾಖಲೆಗಳ ಮೂಲ ಮತ್ತು ನಕಲು ಪ್ರತಿಗಳು ಹಾಗೂ ಡಿಜಿಟಲ್ ಹಣಕಾಸಿನ ವ್ಯವಹಾರದ ಕ್ಯೂ.ಆರ್ ಕೋಡ್, ಆಧಾರ್ ಕಾರ್ಡ್‍ಗೆ ಲಿಂಕ್ ಆಗಿರೋ ಮೊಬೈಲ್ ಸಂಖ್ಯೆ, ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಸ್ಥಳದ ಭಾವಚಿತ್ರ, ಕುಟುಂಬದ ಸದಸ್ಯರೊಂದಿಗೆ ಇರುವ ಭಾವಚಿತ್ರ ಮತ್ತು ವೈಯಕ್ತಿಕ ಪಾಸ್ ಪೋರ್ಟ್  ಸೈಜ್ ಫೋಟೋಗಳನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು. 

ಸಮೀಕ್ಷಾ ಸಮಯದಲ್ಲಿ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಸ್ಥರು ನೋಂದಣಿ ಶುಲ್ಕ ಬಾಬ್ತು 50 ರೂ. ನೀಡಿ, ಸಮೀಕ್ಷದಾರರಿಂದ ಸೂಕ್ತವಾದ ರಶೀದಿಯನ್ನು ಪಡೆದುಕೊಳ್ಳುವಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು