7:26 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸಿ ಬಂದರೆ ಕಾನೂನು ಪ್ರಕಾರ ಕ್ರಮ: ಸಚಿವ ಮಧು ಬಂಗಾರಪ್ಪ ವಾರ್ನಿಂಗ್

24/05/2026, 18:37

ಬೆಂಗಳೂರು(reporterkarnataka.com): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಅವರಿಗೆ ಅದು ನಿಜ. ನಮಗೆ ಸಮಾನತೆಯ ಸಂಕೇತ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆ. ಇದೆ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೆವು. ರಾಜ್ಯದ ಜನರು ಮತ ಕೊಟ್ಟಿದ್ದಾರೆ ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ. ನಮಗೆ ವೋಟ್ ಹಾಕಿದ ಜನರ ಋಣವನ್ನು ತೀರಿಸಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿ ಅವರು ಮೊದಲು ನೋಡಿಕೊಂಡು ಬರಲಿ. ಕೆವಿ ವಿದ್ಯಾರ್ಥಿಗಳಿಗೆ ಮೊದಲು ಕೇಸರಿ ಶಾಲು ಹಾಕಿಸಿ ಕಳುಹಿಸಲಿ ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದರು.
ಇನ್ನೂ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ವಿರುದ್ಧ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರಕ್ಕೆ ಒಂದು ಪರೀಕ್ಷೆ ಮಾಡುವ ಯೋಗ್ಯತೆ ಇಲ್ಲ ನನ್ನ ಇಲಾಖೆಯಲ್ಲಿ ಒಂದೇ ಒಂದು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ. ಕಳೆದ ಮೂರು ವರ್ಷದಿಂದ ಯಾವುದೇ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಉತ್ತರ ಕೊಡಬೇಕಾಗುತ್ತದೆ ಅಂತ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಒಂದು ವಾರ ಓಡಿ ಹೋಗಿದ್ದರು.
ಧರ್ಮೇಂದ್ರ ಪ್ರಧಾನ ಬಳಿ ಬರಲಿ ಸೋರಿಕೆ ಇಲ್ಲದೆ ಪರೀಕ್ಷೆ ಹೇಗೆ ಮಾಡೋದು ಅಂತ ಹೇಳಿ ಕೊಡುತ್ತೇನೆ. ಒಂದೇ ವಾರದಲ್ಲಿ ಧರ್ಮೇಂದ್ರ ಪ್ರಧಾನಿಗೆ ತಿಳುವಳಿಕೆ ಕೊಡುತ್ತೇನೆ ನೀಟ್ ಪರೀಕ್ಷೆಯಲ್ಲಿ 96 ಪ್ರತಿಶತ ಹಿಂದುಳಿದ ವರ್ಗಗಳ ಮಕ್ಕಳಿದ್ದಾರೆ ಅವರ ಕಾಲಿನ ಕೆಳಗೆ ಬಿಜೆಪಿ ನೌಕಲಿ ಆಗಲಾದರೂ ಬುದ್ದಿ ಬರುತ್ತೆ ಎಂದು ಬೆಂಗಳೂರಿನಲ್ಲಿ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು