6:54 PM Sunday24 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಭಟ್ಕಳದಲ್ಲಿ ಘೋರ ದುರಂತ: ತಟ್ಟಿಹಕ್ಕಲ ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 8 ಮಂದಿ ದಾರುಣ ಸಾವು; ಇಬ್ಬರು ಪಾರು

24/05/2026, 18:53

ಭಟ್ಕಳ(reporterkarnataka.com): ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಇಂದು ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 8 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ​ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪವಿರುವ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಈ ದುರಂತ ಸಂಭವಿಸಿದೆ. ಸ್ಥಳೀಯ ನಿವಾಸಿಗಳು ನದಿಯಲ್ಲಿ ಕಪ್ಪೆಚಿಪ್ಪುಗಳನ್ನು ಸಂಗ್ರಹಿಸಲು ತೆರಳಿದ್ದರು. ಈ ವೇಳೆ ನದಿಗೆ ಇಳಿದವರು ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದು ಸಾಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

*​ದುರಂತಕ್ಕೆ ಕಾರಣವೇನು?*
​ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿತ್ತು. ಇದರೊಂದಿಗೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದರಿಂದ ಹೊಳೆಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ನೀರಿನ ರಭಸಕ್ಕೆ ಸಿಲುಕಿ ಇವರೆಲ್ಲರೂ ಮುಳುಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
​ನದಿಯಲ್ಲಿ ಮುಳುಗಿ ಮೃತಪಟ್ಟವರೆಲ್ಲರ ಮೃತದೇಹಗಳನ್ನು ಅಳ್ವೆಕೋಡಿ ಬಳಿ ಪತ್ತೆಹಚ್ಚಿ ಹೊರತೆಗೆಯಲಾಗಿದೆ. ​ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ​ಉಮೇಶ ನಾಯ್ಕ (30), ​ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ​ಲಕ್ಷ್ಮಿ ಶಿವರಾಮ ನಾಯ್ಕ (49) , ​ಜ್ಯೋತಿ ನಾಗಪ್ಪ ನಾಯ್ಕ (34) , ​ಮಾಲತಿ ನಾಯ್ಕ (38) , ​ಮಾಸ್ತಮ್ಮ ನಾಯ್ಕ ಮೃತರು.
​ಘಟನೆಯಲ್ಲಿ ಅದೃಷ್ಟವಶಾತ್ ನಾಗರತ್ನಾ ಮತ್ತು ಮಹಾದೇವಿ ಎಂಬ ಇಬ್ಬರು ಮಹಿಳೆಯರು ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
​ಘಟನಾ ಸ್ಥಳಕ್ಕೆ ಭಟ್ಕಳ ಠಾಣೆಯ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಭೇಟಿ ನೀಡಿದ್ದಾರೆ. ನದಿಯಲ್ಲಿ ಇನ್ನೂ ಕೆಲವರು ಕಣ್ಮರೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರ ಸಹಾಯದೊಂದಿಗೆ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ಭಟ್ಕಳ ನಗರದಲ್ಲಿ ಈ ಘಟನೆಯಿಂದಾಗಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು