ಇತ್ತೀಚಿನ ಸುದ್ದಿ
ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
26/05/2026, 19:31
ನವದೆಹಲಿ(reporterkarnataka.com): ಇಂದು ದೆಹಲಿಯಲ್ಲಿ ನಡೆದ ಸರಣಿ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ. ಸಿ ವೇಣುಗೋಪಾಲ್ ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
*ವೇಣುಗೋಪಾಲ್ ಹೇಳಿದ್ದೇನು?:*
ನಾವು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿದ್ದೇವೆ. ಈ ಉನ್ನತ ಮಟ್ಟದ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಾನು ಭಾಗವಹಿಸಿದ್ದೆ. ಸಭೆಯಲ್ಲಿ ಕೇವಲ ಮುಂಬರುವ ವಿಧಾನ ಪರಿಷತ್ ಚುನಾವಣೆ ಮತ್ತು ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತ್ರ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಾತ್ರ ಮಾತುಕತೆಯಾಗಿದೆ. ಚುನಾವಣಾ ವಿಚಾರವನ್ನು ಹೊರತುಪಡಿಸಿ ನಾವು ಮತ್ಯಾವ ಬಾಕಿ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಿಲ್ಲ. ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಹಾಗೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಉಳಿದೆಲ್ಲಾ ವಿಚಾರಗಳು ಕೇವಲ ವದಂತಿ ಮತ್ತು ಊಹೆ ಮಾತ್ರ ಎಂದು ಎಂದು ಸ್ಪಷ್ಟಪಡಿಸಿದರು.
ಹಾಗಾದ್ರೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನ ಹೊರಗಿಟ್ಟು ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಾಯ್ತಾ? ಇನ್ನು ಸಭೆ ಬಳಿಕ ತೆರಳುವ ಸಂದರ್ಭದಲ್ಲಿ ಸಿದ್ದರಾಮಯ್ಯ ಬೇಸರದಲ್ಲಿ ತೆರಳಿದ್ದು, ಸಂಥಿಂಗ್ ಸಂಥಿಂಗ್ ಬಗ್ಗೆ ಸಭೆಯಲ್ಲಿ ಚರ್ಚೆಗಳಾಗಿವೆ ಎನ್ನಲಾಗುತ್ತಿದೆ.













