ಇತ್ತೀಚಿನ ಸುದ್ದಿ
Breaking : ಮಕ್ಕಳ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯೂ ಅನ್ಯರ ಪಾಲು: ಅಕ್ರಮ ಸಾಗಾಟ ಪತ್ತೆ ಮಾಡಿದ ಅಥಣಿ ಗ್ರಾಮಸ್ಥರು !
17/09/2021, 11:48
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಪಡಿತರ ಅಕ್ಕಿ ಅಕ್ರಮ ಸಾಗಾಟ, ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಅವ್ಯವಹಾರದ ನಡುವೆ ಇನ್ನೊಂದು ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಅಂಗನವಾಡಿ ಮತ್ತು ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಯಡಿ ನೀಡುವ ಹಾಲಿನ ಪುಡಿಯನ್ನು ಅಕ್ರಮ ಸಾಗಾಟ ನಡೆದಿದೆ.
ಅಪೌಷ್ಟಿಕತೆ ಹೋಗಲಾಡಿಸಲು ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತದೆ. ಆದರೆ ಚಿಕ್ಕೋಡಿ ಉಪವಿಭಾಗ ಅಥಣಿ ತಾಲೂಕಿನ ಖಿಳೆಗಾಂವ್ ಗ್ರಾಮದಲ್ಲಿ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿರುವ ಓರ್ವನನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಬೈಕ್ ಮೇಲೆ ಸಾಗಾಟ ಮಾಡುತ್ತಿರುವ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಗಂಗಾಧರ ಶಂಕರ ಪತ್ತಾರ ಎಂದು ತಿಳಿದು ಬಂದಿದೆ.
ಕಳೆದ ಒಂದು ವರ್ಷಗಳಿಂದ, ಇದೇ ರೀತಿಯಾಗಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ, ಖಿಳೇಗಾಂವ್ ಗ್ರಾಮದ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಂದ ಹಾಲಿನಪುಡಿ ಪಾಕೆಟ್ಟು ತೆಗೆದುಕೊಂಡು ಸಾಗಾಟ ಮಾಡುತ್ತಿರುವ ವ್ಯಕ್ತಿಯನ್ನು ಗ್ರಾಮಸ್ಥರು ತಡೆಹಿಡಿದು ತರಾಟೆ ತೆಗೆದುಕೊಂಡರು ಘಟನೆ ಸಂಭವಿಸಿದೆ. ಅದರೊಂದಿಗೆ ಅವನನ್ನು ಅಥಣಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ