4:49 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ ಅರೆಸ್ಟ್, 15 ಕೋಟಿ ರೂ. ಜಪ್ತಿ

27/05/2026, 17:44

ಬೆಂಗಳೂರು(reporterkarnataka.com): ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತ್ಯೇಕವಾಗಿ 23 ಜನರನ್ನು ಬಂಧಿಸಲಾಗಿದ್ದು, 15 ಕೋಟಿ ರೂ. ಜಪ್ತಿ ಮಾಡಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಸಕ್ತ ಐಪಿಎಲ್ ಪಂದ್ಯಾವಳಿ ನಡೆಯುವ ವೇಳೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ.ಸಿಸಿಬಿ ಡಿಸಿಪಿ ಬಿ.ಎಲ್.ಹರಿಬಾಬು ನೇತೃತ್ವದಲ್ಲಿ ಅಧಿಕಾರಿಗಳು ಐಪಿಎಲ್ ಪಂದ್ಯಾವಳಿ ವೇಳೆ ನಡೆಯುವ ಕ್ರಿಕೆಟ್ ಬೆಟ್ಟಿಂಗ್ ಮೇಲೆ ನಿಗಾ ವಹಿಸಿದ್ದರು. ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಪ್ರಕರಣ ದಾಖಲಾಗಿದ್ದು. 23 ಆರೋಪಿಗಳನ್ನು ಬಂಧಿಸಲಾಗಿದೆ.

ಸಿಸಿಬಿ ಪೊಲೀಸ್ ಠಾಣೆಗಳಲ್ಲಿ 9 ಪ್ರಕರಣ ದಾಖಲಾಗಿವೆ. 4 ಪ್ರಕರಣಗಳಲ್ಲಿ ಬಂಧಿತರಾದ 5 ಆರೋಪಿಗಳಿಂದ 1.10 ಲಕ್ಷ ರೂ. ಮೌಲ್ಯದ 7 ಮೊಬೈಲ್ ಜಪ್ತಿ ಮಾಡಲಾಗಿದೆ. 13.37 ಕೋಟಿ ರೂ. ಮೌಲ್ಯದ ಗೇಮಿಂಗ್ ಆಯಪ್ ಗಳ ಚಿಪ್ಸ್ ಗಳನ್ನು ಜಪ್ತಿ ಮಾಡಲಾಗಿದೆ. ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ಒಟ್ಟು 15 ಕೋಟಿ ರೂ. ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು