9:02 PM Wednesday27 - May 2026
ಬ್ರೇಕಿಂಗ್ ನ್ಯೂಸ್
Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ ಸಿಪಿಎಂ ಕಾರ್ಯಕರ್ತರ ದಾಳಿ

27/05/2026, 21:01

ತಿರುವನಂತಪುರಂ(reporterkarnataka.com): ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ವಾಹನಗಳ ಮೇಲೆ ಸಿಪಿಐ(ಎಂ) ಕಾರ್ಯಕರ್ತರು ದಾಳಿ ಮಾಡಿದ್ದಾರೆ.
ಅಧಿಕಾರಿಗಳು ಪರಿಶೀಲನೆ ನಡೆಸಿ ಹಿಂದಿರುಗುತ್ತಿದ್ದಾಗ ಈ ಕೃತ್ಯ ನಡೆದಿದೆ.
ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ವಾಹನ ಸೇರಿ ಮೂರು ವಾಹನಗಳ ಮೇಲೆ ದಾಳಿ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ವಾಹನಗಳಿಗೆ ಒದೆಯುವುದು, ಕಟ್ಟಿಗೆಯಿಂದ ಬಡಿಯುವುದು ಮತ್ತು ತಮ್ಮ ಬಲ ಪ್ರದರ್ಶನ ಮಾಡುವುದರಲ್ಲಿ ನಿರತರಾಗಿದ್ದರು ಎಂದು ವರದಿ ತಿಳಿಸಿದೆ.
ಇದಕ್ಕೂ ಮೊದಲು, ವಿಜಯನ್ ನಿವಾಸದ ಬಳಿ ನಿಲ್ಲಿಸಿದ್ದ ಇ.ಡಿ ವಾಹನಗಳ ಮೇಲೆ ಹೆಲ್ಮೆಟ್, ಪ್ಲಾಸ್ಟಿಕ್ ಬಾಟಲ್‌ಗಳು ಮತ್ತು ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹರಸಾಹಸಪಡೆಬೇಕಾಯಿತು.
ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್(ಸಿಎಂಆರ್‌ಎಲ್‌) ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಿಎಂ ವಿಜಯನ್ ಅವರ ತಿರುವನಂತಪುರದ ಬಾಡಿಗೆ ಮನೆ ಸೇರಿ ಕೇರಳದ 10 ಕಡೆ ದಾಳಿ ನಡೆದಿದ್ದು, ಸ್ಥಳದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.


ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಎಂಬ ಖಾಸಗಿ ಕಂಪನಿಯು 2018 ರಿಂದ 2019ರ ಅವಧಿಯಲ್ಲಿ ವಿಜಯನ್ ಅವರ ಪುತ್ರಿ ಟಿ. ವೀಣಾ ಅವರ ಕಂಪನಿ ಎಕ್ಸಲಾಜಿಕ್ ಸಲ್ಯೂಷನ್ಸ್‌ಗೆ ₹1.72 ಕೋಟಿಯನ್ನು ಅಕ್ರಮವಾಗಿ ಪಾವತಿ ಮಾಡಿದೆ ಎಂದು ಆರೋಪಿಸಲಾಗಿದೆ. ಆದರೆ, ವಿಜಯನ್ ಪುತ್ರಿಯ ಕಂಪನಿಯು ಸಿಎಂಆರ್‌ಎಲ್‌ಗೆ ಯಾವುದೇ ಸೇವೆ ನೀಡಿಲ್ಲ ಎಂದು ಇ.ಡಿ ಮೂಲಗಳು ತಿಳಿಸಿವೆ.
ಇದಕ್ಕೂ ಮೊದಲು, ಕಣ್ಣೂರು ಜಿಲ್ಲೆಯ ಪಿಣರಾಯಿ ಗ್ರಾಮದಲ್ಲಿರುವ ವಿಜಯನ್ ಅವರ ನಿವಾಸದ ಹೊರಗೆ ಜಮಾಯಿಸಿದ್ದ ಸಿಪಿಐ(ಎಂ) ಕಾರ್ಯಕರ್ತರು ಇ.ಡಿ ವಿರುದ್ಧ ಘೋಷಣೆಗಳನ್ನು ಕೂಗಿದ್ದರು, ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ಕ್ರಮವಾಗಿದೆ ಎಂದು ಆರೋಪಿಸಿದ್ದರು.
ವಿಜಯನ್ ಮತ್ತು ಇತರರ ನಿವಾಸಗಳ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು